ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 ಸೆಪ್ಟೆಂಬರ್ 2021
ಅರೋಗ್ಯ ಸಮಸ್ಯೆ ಹಿನ್ನೆಲೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮೊಮ್ಮಗನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಣ್ಣಪುಟ್ಟ ಆರೋಗ್ಯ ಸಮಸ್ಯೆಗೂ ಖಾಸಗಿ ಆಸ್ಪತ್ರೆಗೆ ದೌಡಾಯಿಸುವ ರಾಜಕಾರಣಿಗಳ ಮಧ್ಯೆ ಆರಗ ಜ್ಞಾನೇಂದ್ರ ಅವರ ಕುಟುಂಬದ ನಿರ್ಧಾರ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಗಳಿಸಿದೆ.
ಆರಗ ಜ್ಞಾನೇಂದ್ರ ಅವರ ಮೊಮ್ಮಗ ಒಂಭತ್ತು ತಿಂಗಳ ಆರ್ಯವರ್ಥನಿಗೆ ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು. ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಗೆ ಕರೆತಂದು ಪರೀಕ್ಷಿಸಿ, ಅಲ್ಲಿಯೇ ದಾಖಲು ಮಾಡಲು ಚಿಕಿತ್ಸೆ ಕೊಡಿಸಲಾಯಿತು.

ತೀರ್ಥಹಳ್ಳಿಗೆ ಆಗಮಿಸಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮೊಮ್ಮಗನ ಆರೋಗ್ಯ ವಿಚಾರಿಸಿದರು. ಆತನೊಂದಿಗೆ ಸಮಯ ಕಳೆದರು. ಜ್ಞಾನೇಂದ್ರ ಅವರ ಬೆಂಬಲಿಗರು ಇದರ ಫೋಟೊ, ವಿಡಿಯೋ ತೆಗೆದಿದ್ದರು. ಅದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಗೃಹ ಸಚಿವರು ತಮ್ಮ ಮೊಮ್ಮಗನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ, ಚಿಕಿತ್ಸೆ ಕೊಡಿಸಿರುವುದಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

- ಸಾರ್ವಜನಿಕರೆ ಎಚ್ಚರ, ಹೊಸನಗರದಲ್ಲಿ ಮೆಸ್ಕಾಂ ಅಲರ್ಟ್ ಪ್ರಕಟ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು






