ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 10 JUNE 2021
ವೃದ್ಧೆಯೊಬ್ಬರ ಕತ್ತು ಹಿಸುಕಿ ಅವರ ಬಳಿಯಿದ್ದ ಹಣವನ್ನು ಕಿತ್ತುಕೊಂಡು ಪರಾರಿಯಾಗಲು ಯತ್ನಿಸಿದ ಯುವಕನೊಬ್ಬನನ್ನು ಸಾರ್ವಜನಿಕರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ತೀರ್ಥಹಳ್ಳಿಯ ಕಟ್ಟೆಹಕ್ಕಲು ಬಳಿ ಘಟನೆ ನಡೆದಿದೆ. ಕತ್ತು ಹಿಸುಕಿದ್ದರಿಂದ ಭವಾನಿಯಮ್ಮ (85) ಎಂಬುವವರು ಅಸ್ವಸ್ಥಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಭವಾನಿಯಮ್ಮ ಅವರು ಅಂಚೆ ಕಚೇರಿಯಿಂದ ವೃದ್ಧಾಪ್ಯ ವೇತನದ ಹಣ ಬಿಡಿಸಿಕೊಂಡು ಮನೆಗೆ ಮರಳುತ್ತಿದ್ದರು. ಬೈಕ್‍ನಲ್ಲಿ ಬಂದ ಇಬ್ಬರು ಯುವಕರು ವೃದ್ಧೆಯ ಕತ್ತು ಹಿಸುಕಿ ಹಣ ದೋಚಲು ಯತ್ನಿಸಿದ್ದಾರೆ.
ಕೃತ್ಯವನ್ನು ಗಮನಿಸಿದ ಸ್ಥಳೀಯರು ವೃದ್ಧೆಯ ನೆರವಿಗೆ ಬಂದಿದ್ದಾರೆ. ಈ ವೇಳೆ ಯುವಕರು ಪರಾರಿಯಾಗಲು ಯತ್ನಿಸಿದ್ದಾರೆ. ಈ ಧಾವಂತದಲ್ಲಿ ಶಿವಮೊಗ್ಗದ ಗೋಪಾಳ ನಿವಾಸಿ ನಿತಿನ್ (36) ಎಂಬಾತ ಜನರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಆತನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]