ತೀರ್ಥಹಳ್ಳಿಯೇ ಬೆಸ್ಟ್‌, ಬೆನ್ನುತಟ್ಟಿದ IAS ಅಧಿಕಾರಿ, ಉಳಿದ ಸ್ಥಳೀಯ ಸಂಸ್ಥೆಗಳಿಗೆ ಖಡಕ್‌ ಸೂಚನೆ

ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣದಲ್ಲಿ ಸರಬರಾಜಾಗುತ್ತಿರುವ ಶುದ್ಧ ಕುಡಿಯುವ ನೀರು, ಅದರ ಬಳಕೆ ಮತ್ತು ನಿರ್ವಹಣೆ ಅತ್ಯಂತ ಮಾದರಿಯಾಗಿದೆ. ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಇದೇ ಮಾದರಿಯನ್ನು ಅನುಸರಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಮೆಚ್ಚುಗೆ ವ್ಯಕ್ತಪಡಿಸಿದರು. ➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್‌ಸಾಬ್ ಸಭಾಂಗಣದಲ್ಲಿ ಇಂದು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತೀರ್ಥಹಳ್ಳಿಯ ಜಲ ವಿತರಣಾ ವ್ಯವಸ್ಥೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಆದರೆ, ಉಳಿದ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿನ ನಿವಾಸಿಗಳಿಗೆ ಒದಗಿಸಲಾಗುತ್ತಿರುವ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆ ಸರಿಯಾಗಿ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

IAS-Officer-BB-Kaveri-says-thirthahalli-waters-supply-is-the-best.

ಜನರಿಗೆ ಪೂರೈಕೆ ಮಾಡುವ ಕುಡಿಯುವ ನೀರಿನ ಗುಣಮಟ್ಟವನ್ನು ಕಾಲಕಾಲಕ್ಕೆ ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಬೇಕು. ರಾಜ್ಯದ ಕೆಲವು ಸ್ಥಳಗಳಲ್ಲಿ ನೀರಿನ ಗುಣಮಟ್ಟ ಪರೀಕ್ಷಿಸದ ಕಾರಣಕ್ಕಾಗಿಯೇ ಗಂಭೀರ ಸ್ವರೂಪದ ಆರೋಗ್ಯ ಸಮಸ್ಯೆಗಳು ಕಂಡುಬಂದಿವೆ. ಜಿಲ್ಲೆಯಲ್ಲಿ ಇಂತಹ ಯಾವುದೇ ಪರಿಸ್ಥಿತಿ ಎದುರಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಶಿವಮೊಗ್ಗ JNNCE ಕಾಲೇಜಿನಲ್ಲಿ ADMISSION ಶುರು
JNNCE College Admission 2026
📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!