ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 8 ಜುಲೈ 2021
ಚಪ್ಪಲಿ ಖರೀದಿ ವೇಳೆ ಮಹಿಳೆಯೊಬ್ಬರು ಆಭರಣಗಳಿದ್ದ ಬ್ಯಾಗ್ ಕದ್ದೊಯ್ದಿದ್ದಾರೆ. ತೀರ್ಥಹಳ್ಳಿಯ ಗಾಂಧಿ ಚೌಕದ ಬಳಿಕ ಪಾದರಕ್ಷೆ ಷೋ ರೂಂ ಒಂದರಲ್ಲಿ ಘಟನೆ ಸಂಭವಿಸಿದೆ.
ಹೇಗಾಯ್ತು ಘಟನೆ?
ಕೆಳಗಿನಕೊಪ್ಪದ ವಿನಯ್ ಅವರು ಇಲ್ಲಿನ ಷೋ ರೂಂ ಒಂದರಲ್ಲಿ ಚಪ್ಪಲಿ ಖರೀದಿಗೆ ಬಂದಿದ್ದರು. ಅಂಗಡಿಯಲ್ಲಿದ್ದ ಚೇರ್ ಮೇಲೆ ಕೂರುವಾಗ ತಾವು ತಂದಿದ್ದ ಬ್ಯಾಗನ್ನು ಪಕ್ಕದಲ್ಲಿ ಇರಿಸಿದ್ದರು. ಈ ವೇಳೆ ಅಲ್ಲಿಯೇ ಇದ್ದ ಮಹಿಳೆಯೊಬ್ಬರು ಆ ಬ್ಯಾಗನ್ನು ಕೊಂಡೊಯ್ದಿದ್ದಾರೆ.
ವಿನಯ್ ಮತ್ತು ಅವರೊಂದಿಗೆ ಇದ್ದವರು ಚಪ್ಪಲಿಯ ಆಯ್ಕೆಯತ್ತ ಗಮನ ಹರಿಸಿದ್ದಾಗ, ಬ್ಯಾಗ್ ನಾಪತ್ತೆಯಾಗಿದೆ. ಮಹಿಳೆ ಬ್ಯಾಗ್ ಕದ್ದೊಯ್ಯುವುದು ಷೋ ರೂಂನಲ್ಲಿದ್ದ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.
ಬ್ಯಾಗ್‍ನಲ್ಲಿ ಸುಮಾರು 65 ಸಾವಿರ ಮೌಲ್ಯದ ಆಭರಣ ಇತ್ತು ಎಂದು ವಿನಯ್ ಅವರು ದೂರಿನಲ್ಲಿ ತಿಳಿಸಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಹತ್ಯೆ, ಸ್ಥಳಕ್ಕೆ ತುಂಗಾ ನಗರ ಪೊಲೀಸರು ದೌಡು

- ಭದ್ರಾವತಿ ವ್ಯಕ್ತಿಗೆ 2 ವರ್ಷ ಜೈಲು, ₹10,000 ದಂಡ, ಕಾರಣ ಹೂವಿನ ಗಿಡ

- ಶಿವಮೊಗ್ಗದ ಸವಾರರೆ ಹುಷಾರ್, ಬೈಕ್ನಿಂದ ಬಿದ್ದರು, ಆಟೋ ಜಖಂ, ಕಾರ್ ಕೆಳಗೆ ಡ್ಯಾಮೇಜ್, ಏನಿದು?

- ಭದ್ರಾವತಿ ಹೊಸ ಸಿದ್ಧಾಪುರದಲ್ಲಿ ಮನೆಗೆ ನುಗ್ಗಿದ ಕಳ್ಳರು, ಲಕ್ಷ ಲಕ್ಷ ಮೌಲ್ಯದ ವಸ್ತುಗಳು ಕಳವು

- ಇವತ್ತಿನ ₹98,140ಕ್ಕೆ ತಲುಪಿದೆ ಅಡಿಕೆ | 12 ಫೆಬ್ರವರಿ 2026 | ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು






