ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 1 APRIL 2023
SHIMOGA : ಬಾಳೆಬರೆ ಘಾಟ್ ಎರಡು ಭಾಗದಲ್ಲಿ ಕಾಂಕ್ರಿಟ್ ಪೇವ್ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಹಾಗಾಗಿ ಏ.15ರವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ. ವಾಹನಗಳಿಗೆ (Vehicle) ಪರ್ಯಾಯ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.

ತೀರ್ಥಹಳ್ಳಿ – ಕುಂದಾಪುರ ರಾಜ್ಯ ಹೆದ್ದಾರಿಯ ಬಾಳೆಬರೆ ಘಾಟಿಯಲ್ಲಿ ಕಾಂಕ್ರಿಟ್ ಪೇವ್ಮೆಂಟ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಈ ಹಿಂದೆ ಏಪ್ರಿಲ್ 5 ರವರೆಗೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಕಾಮಗಾರಿ ನಡೆಯುವಾಗ ಹಲವು ಬಾರಿ ಯಂತ್ರೋಪಕರಣಗಳು ದುರಸ್ಥಿಗೆ ಒಳಪಟ್ಟ ಕಾರಣ ಸಂಚಾರ ವ್ಯವಸ್ಥೆಯನ್ನು ಇನ್ನೂ ಹೆಚ್ಚುವರಿ ಹತ್ತು ದಿನ ವಿಸ್ತರಿಸಲಾಗಿದೆ.
ಹಾಲಿ ಬಳಕೆ ಮಾಡುತ್ತಿರುವ ರಸ್ತೆಗಳು ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಲಘು ವಾಹನಗಳು (Vehicle) ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಹಾಲಾಡಿ-ಬಸ್ರೂರು-ಕುಂದಾಪುರ ರಸ್ತೆ ಅಥವಾ ತೀರ್ಥಹಳ್ಳಿ-ಹೆಬ್ರಿ-ಉಡುಪಿ-ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ..
ರಾಜ್ಯ ಹೆದ್ದಾರಿ-52 ತೀರ್ಥಹಳ್ಳಿ ಮೂಲಕ ಕುಂದಾಪುರ ಕಡೆ ಹೋಗುವ ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ತೀರ್ಥಹಳ್ಳಿ-ಕಾನಗೋಡು-ನಗರ-ಕೊಲ್ಲೂರು ಕುಂದಾಪುರ ಈ ರಸ್ತೆ ಮೂಲಕ ಸಂಚರಿಸಬೇಕಾಗಿದೆ.

ಶಿವಮೊಗ್ಗ, ಸಾಗರ ಕಡೆಯಿಂದ ಹೊಸನಗರದ ಮೂಲಕ ಕುಂದಾಪುರ ಕಡೆ ಹೋಗುವ ಲಘು/ಭಾರಿ ವಾಹನಗಳು ಪರ್ಯಾಯ ಮಾರ್ಗವಾಗಿ ಹೊಸನಗರ-ನಗರ-ಕೊಲ್ಲೂರು ರಸ್ತೆ ಮೂಲಕ ಸಂಚರಿಸಲು ಅಧಿಸೂಚನೆ ಹೊರಡಿಸಿದ್ದಾರೆ.
ಇದನ್ನೂ ಓದಿ – ಕಾರಿನಲ್ಲಿ ರಾಶಿ ರಾಶಿ ಬಿಯರ್ ಬಾಟಲ್, ಟಿನ್, ಕೇಸ್ ದಾಖಲು, ಈತನಕ ಎಲ್ಲೆಲ್ಲಿ ಎಷ್ಟು ಮದ್ಯ ಸೀಜ್ ಆಗಿದೆ?
LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













