ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 15 JANUARY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಎರಡನೇ ಶಬರಿಮಲೈ ಎಂದು ಪ್ರಖ್ಯಾತಿ ಪಡೆದಿರುವ ಬೆಜ್ಜವಳ್ಳಿಯ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ತಿರುವಾಭರಣ ಉತ್ಸವ ವಿಜೃಂಭಣೆಯಿಂದ ನೆರವೇರಿತು. ಕೋವಿಡ್ ಆತಂಕದ ನಡುವೆಯು ಭಾರಿ ಸಂಖ್ಯೆಯ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು, ದೇವರ ಕೃಪೆಗೆ ಪಾತ್ರರಾದರು.
ತಿರುವಾಭರಣ ಉತ್ಸವ ಜೋರು
ಡಾ.ಸಂತೋಷ್ ಭಾರತಿ ಅವರ ಮನೆಯಿಂದ ತಿರುವಾಭರಣಗಳನ್ನು ದೇಗುಲಕ್ಕೆ ಹೊತ್ತು ತರಲಾಯಿತು. ಈ ಸಂದರ್ಭ ಭಕ್ತರು ಘೋಷಣೆಗಳನ್ನು ಕೂಗಿದರು. ಡೊಳ್ಳು, ಕಂಸಾಳೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳು ಇದ್ದವು.
ಈ ಬಾರಿಯು ಗರುಡ ದರ್ಶನ
ತಿರುವಾಭರಣ ಹೊತ್ತು ಸಾಗುವಾಗ ಗರುಡ ಪ್ರತ್ಯಕ್ಷವಾಗಲಿದೆ ಎಂಬ ನಂಬಿಕೆ ಇದೆ. ಇದನ್ನು ಕಣ್ತುಂಬಿಕೊಂಡರೆ ಒಳಿತಾಗಲಿದೆ ಎಂಬ ನಂಬಿಕೆ ಭಕ್ತರದ್ದರು. ಈ ಬಾರಿಯು ಗುರುಡ ದರ್ಶನವಾಗಿದೆ.
ದೇಗುಲದಲ್ಲಿ ವಿಶೇಷ ಪೂಜೆ
ತಿರುವಾಭರಣಗಳು ತಲುಪಿದ ಬಳಿಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಡಾ.ಸಂತೋಷ್ ಭಾರತಿ ಅವರು ಪೂಜಾ ಕೈಂಕರ್ಯ ನೆರವೇರಿಸಿದರು. ಈ ವೇಳೆ ದೇವರನ್ನು ಕಣ್ತುಂಬಿಕೊಳ್ಳಲು ಭಕ್ತರು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]