ತೀರ್ಥಹಳ್ಳಿ ಭಾರತಿಪುರದ ಮೇಲ್ಸೇತುವೆ ಬಹುತೇಕ ಪೂರ್ಣ, ಕಾಮಗಾರಿ ಪರಿಶೀಲಿಸಿದ ಶಾಸಕ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | 19 JUNE 2024

THIRTHAHALLI : ಭಾರತಿಪುರದಲ್ಲಿ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ (Bridge) ಕಾಮಗಾರಿಯನ್ನು ಶಾಸಕ ಆರಗ ಜ್ಞಾನೇಂದ್ರ ಪರಿಶೀಲನೆ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್‌ ನವೀನ್‌ ರಾಜ್‌ ಅವರಿಂದ ಕಾಮಗಾರಿ ಪ್ರಗತಿ ಕುರಿತು ಮಾಹಿತಿ ಪಡೆದರು.

ತೀರ್ಥಹಳ್ಳಿ ತಾಲೂಕು ಭಾರತಿಪುರ ತಿರುವಿನಲ್ಲಿ 56 ಕೋಟಿ ರೂ. ವೆಚ್ಚದಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಈ ಹಿನ್ನೆಲೆ ಶಾಸಕ ಆರಗ ಜ್ಞಾನೇಂದ್ರ ಅವರು ಪರಿಶೀಲನೆ ನಡೆಸಿದರು.

ಕಿಸಾನ್‌ ಸಮ್ಮಾನ್‌ ಅನ್ನದಾತರ ಸಂಕಷ್ಟಕ್ಕೆ ನರವಾಗಲಿದೆ

KONANDURU : ಅನ್ನದಾತರ ಸಂಕಷ್ಟಕ್ಕೆ ನೆರವಾಗುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಿಸಾನ್‌ ಸಮ್ಮಾನ್ ವಿಮಾ ಯೋಜನೆಯಲ್ಲಿ 20 ಸಾವಿರ ಕೋಟಿ ರೂ. ಬಿಡುಗಡೆ ಮಾಡುತ್ತಿದೆ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಿಸಾನ್‌ ಸಮ್ಮಾನ್‌ ಯೋಜನೆ ಅನುದಾನ ಬಿಡುಗಡೆ ಕಾರ್ಯಕ್ರಮವನ್ನು ಕೋಣಂದೂರಿನ ರೈತರ ಸಂಪರ್ಕ ಕೇಂದ್ರದಲ್ಲಿ ಟಿವಿಯಲ್ಲಿ ವೀಕ್ಷಿಸಿದ ಬಳಿಕ ಆರಗ ಜ್ಞಾನೇಂದ್ರ ಮಾತನಾಡಿದರು. ಹವಾಮಾನ ವೈಪರೀತ್ಯ ಮುಂತಾದ ಕಾರಣಗಳಿಂದ ಸಂಕಷ್ಟಕ್ಕೀಡಾಗುವ ರೈತರ ನೆರವಿಗೆ ಈ ಯೋಜನೆ ಅತ್ಯಂತ ಸಹಕಾರಿ ಎಂದರು.

ಕೋಣಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಗಳಾ ಗೋಪಿ, ಹುಂಚದಕಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ತಾರಾನಾಥ್, ಕಟ್ಟೆ ಮಹೇಶ್, ಬಿಜ್ಜಳ ಧರಣಿ, ಸತೀಶ್ ಶೆಟ್ಟಿ ಹಾಗೂ ಕೃಷಿ ಅಧಿಕಾರಿ ಅಜಿತ್‌ ಇದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ ಮಾಡಿದ ಟ್ರಾಫಿಕ್‌ ಪೊಲೀಸ್‌

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment