ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಜುಲೈ 2021
ನಿಂತಿದ್ದ ಕಾರಿಗೆ ಬೈಕ್ ಡಿಕ್ಕಿಯಾಗಿ ನಿವೃತ್ತ ಟೆಲಿಕಾಂ ಅಧಿಕಾರಿಯೊಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ತಾಲೂಕು ತೂದೂರು ಗ್ರಾಮದ ಬಳಿಕ ಘಟನೆ ಸಂಭವಿಸಿದೆ.
ಕೃಷ್ಣನ್ ಕುಟ್ಟಿ (65) ಮೃತರು. ತೂದೂರು ಗ್ರಾಮದಿಂದ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ರಸ್ತೆ ಬದಿಯಲ್ಲಿ ಕಾರು ನಿಂತಿರುವುದು ಗೊತ್ತಾಗದೆ ಡಿಕ್ಕಿಯಾಗಿದೆ.
ಗಂಭೀರ ಗಾಯಗೊಂಡಿದ್ದ ಕೃಷ್ಣನ್ ಕುಟ್ಟಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200