ರಸ್ತೆ ಬದಿ ಬೈಕ್‌ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಯುವಕನಿಗೆ ಮತ್ತೊಂದು ಬೈಕ್‌ ಡಿಕ್ಕಿ, ತಲೆಗೆ ತೀವ್ರ ಗಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 NOVEMBER 2023

THIRTHAHALLI : ರಸ್ತೆ ಬದಿ ಬೈಕ್‌ ನಿಲ್ಲಿಸಿ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ ಯುವಕನಿಗೆ ಮತ್ತೊಂದು ಬೈಕ್‌ ಡಿಕ್ಕಿ ಹೊಡೆದು ತಲೆಗೆ ತೀವ್ರ ಸ್ವರೂಪದ ಗಾಯವಾಗಿದೆ. ರಂಜದಕಟ್ಟೆ ಗ್ರಾಮ ಪಂಚಾಯಿತಿ ಕಚೇರಿ ಮುಂದೆ ಘಟನೆ ಸಂಭವಿಸಿದೆ.

ರಂಜದಕಟ್ಟೆಯ ಅಭಿಷೇಕ್‌ (32) ತನ್ನ ಸ್ನೇಹಿತನ ಬೈಕನ್ನು ರಸ್ತೆಯ ಎಡ ಬದಿಯಲ್ಲಿ ನಿಲ್ಲಿಸಿಕೊಂಡು ಮೊಬೈಲ್‌ನಲ್ಲಿ ಮಾತನಾಡುತ್ತಿದ್ದ. ಹಿಂಬದಿಯಿಂದ ವೇಗವಾಗಿ ಬಂದ ಮತ್ತೊಂದು ಬೈಕ್‌ ಅಭಿಷೇಕ್‌ನ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಇನ್ನೊಂದು ಬೈಕ್‌ನ ಸವಾರ ಬೈಕ್‌ ನಿಲ್ಲಿಸಿದೆ ಪರಾರಿಯಾಗಿದ್ದಾನೆ.

ಅಭಿಷೇಕ್‌ ತಲೆಗೆ ತೀವ್ರ ಸ್ವರೂಪದ ಗಾಯವಾಗಿತ್ತು. ಕೂಡಲೆ ತೀರ್ಥಹಳ್ಳಿ ಜೆ.ಸಿ.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸಗೆ ಮಣಪಾಲದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ವಾಹನಗಳನ್ನು ಅಡ್ಡಗಟ್ಟಿ ದರೋಡೆಗೆ ಸ್ಕೆಚ್‌, ರಾಡ್‌, ಲಾಂಗ್‌, ಖಾರದ ಪುಡಿ ಸಹಿತ ಸಿಕ್ಕಿಬಿತ್ತು ಗ್ಯಾಂಗ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment