ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 FEBRUARY 2021
ಹುಟ್ಟುಹಬ್ಬದ ಸಂಭ್ರಮ ಅಂದರೆ ಮೋಜು, ಮಸ್ತಿ ಸಾಮಾನ್ಯ ಎಂಬಂತಾಗಿದೆ. ಆದರೆ ಇಲ್ಲೊಬ್ಬರು ತಮ್ಮೂರಿನ ಸರ್ಕಾರಿ ಶಾಲೆಯ ಮಕ್ಕಳ ಜೊತೆ ಹುಟ್ಟುಹಬ್ಬ ಆಚರಸಿಕೊಂಡು, ಸಾವಿರಾರು ರುಪಾಯಿಯ ಕ್ರೀಡಾ ಪರಿಕರಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಹೊನ್ನೆತಾಳು ಗ್ರಾಮದ ಪ್ರಾಥಮಿಕ ಶಾಲೆಗೆ ಕ್ರೀಡಾ ಪರಿಕರಗಳನ್ನು ಕೊಡುಗೆಯಾಗಿ ನೀಡಲಾಗಿದೆ.
ಪೇಟಿಯಂ ಸಂಸ್ಥೆಯ ಬೆಂಗಳೂರನ ಉದ್ಯೋಗಿಯಾಗಿರುವ ವಿಶಾಕ್ ಅವರು ತಮ್ಮ ಹುಟ್ಟುಹಬ್ಬದಂದು ಊರಿನ ಶಾಲೆಗೆ ಕೊಡುಗೆ ನೀಡಿದ್ದಾರೆ. ಹುಟ್ಟುಹಬ್ಬದ ದಿನ ಶಾಲೆಯ ಮಕ್ಕಳು, ಸಿಬ್ಬಂದಿಗಳಿಗೆ ಸಿಹಿ ಹಂಚಿ, ಮಕ್ಕಳಿಗೆ ಅನುಕೂಲ ಆಗುವ ಕ್ರೀಡಾ ಪರಿಕರಗಳನ್ನು ಶಾಲೆಗೆ ಕೊಡುಗೆ ನೀಡಿದರು.
ಇದನ್ನೂ ಓದಿ | ಅದ್ಧೂರಿ ಮದುವೆಯ ಹಣ ಶಾಲೆಗೆ ದೇಣಿಗೆ ನೀಡಿದ ತೀರ್ಥಹಳ್ಳಿ ಯುವತಿ
ಎಸ್ಡಿಎಂಸಿ ತರಬೇತಿ ನಡೆಯುತ್ತಿದ್ದ ಸಂದರ್ಭ ಈ ಉಡುಗೊರೆ ನೀಡಿದ್ದಾರೆ. ಈ ವೇಳೆ ವಿಶಾಕ್ ಅವರನ್ನು ಶಾಲೆ ವತಿಯಿಂದ ಗೌರವಿಸಲಾಯಿತು.
ಇದನ್ನೂ ಓದಿ | ಇದು ಸಣ್ಣ ಸಾಧನೆಯಲ್ಲ, ಇದಕ್ಕೆಲ್ಲ ನೀವೆ ಕಾರಣ, ಧನ್ಯವಾದ ಶಿವಮೊಗ್ಗ
ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಉಷಾ, ಸಿಆರ್ಪಿ ಕಲಾವತಿ, ಮುಖ್ಯ ಶಿಕ್ಷಕಿ ಸುರೇಖಾ ಶೇಟ್, ಎಸ್ಡಿಎಂಸಿ ಅಧ್ಯಕ್ಷ ನಿತ್ಯಾನಂದ ಅಣುಗೋಡು ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]