ಶಿವಮೊಗ್ಗ LIVE
ತೀರ್ಥಹಳ್ಳಿ: ಅಡಿಕೆ ಸುಲಿಯುವ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೊಬ್ಬ ಮಾಲೀಕರ ಬೊಲೆರೋ ವಾಹನವನ್ನೇ (Bolero Theft) ಕಳ್ಳತನ ಮಾಡಿ ಪರಾರಿಯಾಗಿದ್ದಾನೆ. ತೀರ್ಥಹಳ್ಳಿ ತಾಲೂಕು ಮೇಳಿಗೆ ಸಮೀಪದ ಮಂಡವಳ್ಳಿಯಲ್ಲಿ ಘಟನೆ ನಡೆದಿದೆ.
ದೇವರಾಜ ಎಂಬವವರು ಅಡಿಕೆ ವ್ಯಾಪಾರಿಯಾಗಿದ್ದು, ಕೆಲಸಕ್ಕಾಗಿ ಹೊರ ಜಿಲ್ಲೆಗಳಿಂದ ಸುಮಾರು 40 ಕಾರ್ಮಿಕರನ್ನು ಕರೆತಂದಿದ್ದರು. ಜನವರಿ 6ರಂದು ಮಧ್ಯರಾತ್ರಿ ಮನೆಯ ಕಾಂಪೌಂಡ್ ಪಸಕ್ಕದಲ್ಲಿ ನಿಲ್ಲಿಸಿದ್ದ ಅಳಿಯ ಮನೋಜ್ ಅವರಿಗೆ ಸೇರಿದ ಮಹೇಂದ್ರ ಬೊಲೆರೋ ವಾಹನ ಕಳ್ಳತನವಾಗಿದೆ. ಎಲ್ಲೆಡೆ ವಿಚಾರಿಸಿದಾಗ ಅಡಿಕೆ ಸುಲಿಯುವ ಕೆಲಸಕ್ಕೆ ಬಂದಿದ್ದ ವಿಜಯನಗರ ಜಿಲ್ಲೆಯ ಸಿದ್ದಪ್ಪ ಕಳ್ಳತನ ಮಾಡಿದ್ದಾನೆ ಎಂದು ಗೊತ್ತಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಘಟನೆ ಸಂಬಂಧ ದೇವರಾಜ ಅವರು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಯುತ್ತಿದೆ.
ಇದನ್ನೂ ಓದಿ » ಸೂಡೂರು ಬಳಿ ಅಪಘಾತ, ಕೃಷಿ ಇಲಾಖೆ ನಿವೃತ್ತ ಅಧಿಕಾರಿ ಸಾವು, ಹೇಗಾಯ್ತು ಘಟನೆ?
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






