ಕಾರು ಡಿಕ್ಕಿ, ಆರು ವರ್ಷದ ಬಾಲಕ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ: ಕಾರು ಡಿಕ್ಕಿಯಾಗಿ ತೀವ್ರ ಗಾಯಗೊಂಡಿದ್ದ ಆರು ವರ್ಷದ ಬಾಲಕ ಕೊನೆಯುಸಿರೆಳೆದಿದ್ದಾನೆ. ತೀರ್ಥಹಳ್ಳಿ ತಾಲೂಕು ತ್ರಿಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡಗದ್ದೆಯ ಋಷ್ಯ (6) ಮೃತ ಬಾಲಕ.

ಆಟವಾಡುತ್ತ ರಸ್ತೆ ಬಂದಿದ್ದ ಋಷ್ಯನಿಗೆ ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಆತನನ್ನು ಕೂಡಲೆ ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಕರೆತರಲಾಗಿತ್ತು. ಅಷ್ಟರಲ್ಲಿ ಕೊನೆಯುಸಿರೆಳೆದಿದ್ದ ಎಂದು ತಿಳಿದುಬಂದಿದೆ. ಋಷ್ಯ, ಪತ್ರಕರ್ತ ಪ್ರಗತ್‌.ಕೆ.ಆರ್‌ ಮತ್ತು ರಂಜನಾ ದಂಪತಿಯ ಪುತ್ರ. ತೀರ್ಥಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

Rushya-Pragath-No-More.