ಶಿವಮೊಗ್ಗ ಲೈವ್.ಕಾಂ | 4 ಡಿಸೆಂಬರ್ 2018
ವಿದ್ಯಾರ್ಥಿಯೊಬ್ಬನ ಕೊಲೆ ಹಿನ್ನೆಲೆ ತೀರ್ಥಹಳ್ಳಿಯಲ್ಲಿ ಶಾಲಾ, ಕಾಲೇಜು ಆಡಳಿತ ಮಂಡಳಿ, ಪ್ರಾಚಾರ್ಯರು, ಮುಖ್ಯ ಶಿಕ್ಷಕರು, ಪೊಲೀಸರ ಸಮಾಲೋಚನಾ ಸಭೆ ನಡೆಯಿತು. ಶಾಸಕ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ತಾಲೂಕಿನಲ್ಲಿ ಕಾನೂನು ಬಿಗಿಗೊಳಿಸಬೇಕು. ಇಲ್ಲವಾದಲ್ಲಿ ಪೊಲೀಸ್ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಶಾಸಕ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದರು.
ಏನೇನು ಚರ್ಚೆಯಾಯ್ತು?
ತಾಲೂಕಿನ ಘನತೆಗೆ ಧಕ್ಕೆ ತರುವಂತಹ ಘಟನೆಗಳು ಈಚೆಗೆ ನಡೆದಿವೆ. ಇದರಿಂದ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪಟ್ಟಣ ವ್ಯಾಪ್ತಿಯಲ್ಲಿ ಗಾಂಜಾ ಸೇರಿದಂತೆ ಮಾದಕ ವಸ್ತುಗಳನ್ನು ಈಗಿಂದೀಗಲೇ ನಿಯಂತ್ರಣ ಮಾಡಬೇಕಿದೆ. ಕಾಲೇಜು ಕ್ಯಾಂಪಸ್’ಗಳ ಒಳಗೆ ಅಪರಿಚಿತರ ಪ್ರವೇಶವನ್ನು ನಿರ್ಬಂಧಿಸೇಕು ಎಂಬುದರ ಚರ್ಚೆ ಮಾಡಲಾಯಿತು.
ಖಡಕ್ ವಾರ್ನಿಂಗ್ ನೀಡಿದ ಎಂಎಲ್ಎ
ನನ್ನ ಅಧಿಕಾರವಧಿಯಲ್ಲಿ ಅಕ್ರಮ ದಂಧೆಗಳು ನಡೆಯಬಾರದು ಎಂದು ಸೂಚನೆ ನೀಡಿದ ಶಾಸಕ ಆರಗ ಜ್ಞಾನೇಂದ್ರ, ಇವತ್ತಿಂದಲೇ ಇಸ್ಪೀಟ್ ದಂಧೆ, ಅಕ್ರಮ ಮದ್ಯ ಮಾರಾಟ ದಂಧೆಯನ್ನು ತಡೆಬೇಕು ಎಂದು ಒತ್ತಾಯಿಸಿದರು. ಯಾವುದೇ ಒತ್ತಡಕ್ಕೂ ಮಣಿಯದೆ ಕ್ರಮ ಕೈಗೊಳ್ಳಬೇಕು. ನನ್ನ ಮಾತು ಮೀರಿ ಅವಕಾಶ ನೀಡಿದರೆ, ಪೊಲೀಸ್ ಠಾಣೆ ಎದುರಿಗೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು. ಇನ್ನು, ತೀರ್ಥಹಳ್ಳಿ ಟೌನ್ ಕ್ಲಬ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನಡೆಯಬೇಕು ಅಂತಾ ತಹಶೀಲ್ದಾರ್ ಆನಂದಪ್ಪನಾಯಕ್ ಅವರಿಗೆ ಸೂಚಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494