ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಆಗಸ್ಟ್ 2020
ಭಾರಿ ಮಳೆಗೆ ತೀರ್ಥಹಳ್ಳಿ ತಾಲೂಕಿನ ಸೇತುವೆಯೊಂದರ ಪಕ್ಕದಲ್ಲಿ ಮಣ್ಣು ಕುಸಿದಿದೆ. ಭಾರಿ ವಾಹನ ಸಂಚಾರವನ್ನು ಇಲ್ಲಿ ನಿರ್ಬಂಧಿಸಲಾಗಿದೆ.
ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ದತ್ತರಾಜಪುರ – ಕುಕ್ಕೆ ಮಾರ್ಗದ ರಸ್ತೆಯಲ್ಲಿ ಈ ಸೇತುವೆ ಇದೆ. ಇದರ ಪಕ್ಕದಲ್ಲಿ ಮಣ್ಣು ಕುಸಿದಿದೆ. ವಿಚಾರ ತಿಳಿಯುತ್ತಿದ್ದಂತೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸೇತುವೆ ದುರಸ್ಥಿ ಕಾರ್ಯ ಕುರಿತು ಅಧಿಕಾರಿಗಳು ಚರ್ಚೆ ನಡೆಸಿದರು. ಮಣ್ಣು ಮತ್ತಷ್ಟು ಕುಸಿಯದಂತೆ ತಡೆಯಲು ಮರಳಿನ ಮೂಟೆಗಳನ್ನು ಹಾಕಲಾಗಿದೆ. ಸೇತುವೆ ಮೇಲೆ ಸದ್ಯ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]