ಕುಟುಂಬದವರು ಒಳಗೆ ಮಲಗಿರುವಾಗಲೆ ಮನೆಯೊಳಗೆ ನುಗ್ಗಲು ಯತ್ನಿಸಿದ ಕಳ್ಳರು, ಎಲ್ಲಿ? ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ತೀರ್ಥಹಳ್ಳಿ: ತಾಲೂಕಿನ ಲಿಂಗಾಪುರ ಗ್ರಾಮದ ಸೌತೆಮಕ್ಕಿಯಲ್ಲಿ ಕುಟುಂಬದವರು ಒಳಗೆ ಮಲಗಿದ್ದಾಗಲೇ ಮನೆಯೊಂದರ ಬಾಗಿಲು ಮುರಿದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ನಡೆಸಿದೆ. ಈ ಸಂಬಂಧ ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಗ್ರಾಮದ ರೈತ ರಾಮದಾಸ್ ಕೆ.ಪಿ. ಎಂಬುವವರ ಮನೆಯಲ್ಲಿ ಕೃತ್ಯ ನಡೆದಿದೆ. ರಾಮದಾಸ್, ಅವರ ಪತ್ನಿ ಹಾಗೂ ಸಂಬಂಧಿ ಮುಕುಂದ ಎಂಬುವವರು ರಾತ್ರಿ ಊಟ ಮುಗಿಸಿ ಮನೆಯೊಳಗೆ ಮಲಗಿದ್ದರು. ಜೂನ್ 18ರ ತಡರಾತ್ರಿ ಬಂದ ಕಳ್ಳರು, ಮನೆಯ ಮುಂದೆ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾವನ್ನು ಒಡೆದು ಹಾಕಿದ್ದಾರೆ. ಬಳಿಕ ಮನೆಯ ಹಿಂಬಾಗಿಲಿನ ಚಿಲಕ ಹಾಕಿ, ಆಯುಧದಿಂದ ಮುಂಭಾಗದ ಬಾಗಿಲನ್ನು ಒಡೆಯಲು ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.  

Maluru-Police-Station-in-Thirthahalli-taluk.webp

ಬೆಳಗ್ಗೆ ಮನೆಯವರು ಎದ್ದು ನೋಡಿದಾಗ ಬಾಗಿಲು ಜಖಂಗೊಂಡಿರುವುದು ಹಾಗೂ ಸಿಸಿಟಿವಿ ಕ್ಯಾಮೆರಾ ಹಾಳಾಗಿರುವುದು ಬೆಳಕಿಗೆ ಬಂದಿದೆ. ಬಾಗಿಲು ಒಡೆಯಲು ಸಾಧ್ಯವಾಗದ ಕಾರಣ ಕಳ್ಳತನ ಯತ್ನ ವಿಫಲವಾಗಿದೆ. ಈ ಕುರಿತು ರಾಮದಾಸ್ ಅವರು ದೂರು ನೀಡಿದ್ದಾರೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!