ಶಿವಮೊಗ್ಗ ಲೈವ್.ಕಾಂ | AGUMBE | 01 ಡಿಸೆಂಬರ್ 2019
ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಮೂವರಿಗೆ ಗಾಯವಾಗಿದ್ದು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ. ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200
ಆಗುಂಬೆ ಸಮೀಪದ ಬಿಳಚಿಕಟ್ಟೆ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಹೇಗಾಯ್ತು ಘಟನೆ?
ತೀರ್ಥಹಳ್ಳಿಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಆಗುಂಬೆ ಕಡೆಯಿಂದ ತೀರ್ಥಹಳ್ಳಿಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ವಾಹನವೊಂದನ್ನು ಹಿಂದಿಕ್ಕುವ ರಭಸದಲ್ಲಿ ಬಸ್ಸು ಕಾರಿಗೆ ಗುದ್ದಿದೆ ಎಂದು ಸ್ಥಳೀಯರು ದೂರಿದ್ದಾರೆ. ಬಿಳಚಿಕಟ್ಟೆ ತಿರುವು ಅಪಘಾತ ವಲಯವಾಗಿದೆ. ಇದೇ ತಿರುವಿನಲ್ಲಿ ಕಾರು ಬಸ್ಸು ಡಿಕ್ಕಿ ಸಂಭವಿಸಿದೆ.

ಕಾರಿನಲ್ಲಿದ್ದ ಮೂವರಿಗೆ ಗಾಯ
ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ. ಪ್ರೀತಂ ಎಂಬುವವರ ಕಾಲಿಗೆ ಗಂಭೀರ ಗಾಯವಾಗಿದೆ. ಪ್ರೀತಂ ತಾಯಿ ಪ್ರಮೀಳಾ ಮತ್ತು ಮಾವ ಗೋವಿಂದ ಅವರಿಗೆ ಗಾಯವಾಗಿದ್ದು, ಮೂವರನ್ನು ಮಣಿಪಾಲದ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರು ಚಾಲಕ ಪ್ರಶಾಂತ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಇವರು ಆಗುಂಬೆ ಸಮೀಪದ ಕೆಂದಾಳುಬೈಲು ಗ್ರಾಮದವರು.

ಚಾಲಕನ ನಿರ್ಲಕ್ಷ್ಯಕ್ಕೆ ಆಕ್ರೋಶ
ಬಸ್ ಚಾಲಕನ ನಿರ್ಲಕ್ಷ್ಯದಿಂದಾಗಿ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ. ಘಟನೆ ಬಳಿಕ ಸಾರ್ವಜನಿಕರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಇನ್ನು, ಡಿಕ್ಕಿಯ ರಭಸಕ್ಕೆ ರಸ್ತೆ ಪಕ್ಕದ ಚರಂಡಿ ಹೋಗಿ ಬಿದ್ದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Three injured in collusion between car and a private bus near Agumbe in Thirthahalli. Locals allege that the negligence of Private Bus Driver is the cause for Accident. Injured has been shifted to Manipal Hospital.