ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
THIRTHAHALLI : ಕಾರಿನಲ್ಲಿ (Car) ಬೆಂಕಿ ಕಾಣಿಸಿಕೊಂಡಿದ್ದು ಕೆಲವೆ ನಿಮಿಷದಲ್ಲಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಸೋಮವಾರ ರಾತ್ರಿ ಘಟನೆ ಸಂಭವಿಸಿದೆ.
ತೀರ್ಥಹಳ್ಳಿ ತಾಲೂಕು ಮಂಡಗದ್ದೆಯ 15ನೇ ಮೈಲಿಕಲ್ಲು ಬಳಿಕ ಘಟನೆ ಸಂಭವಿಸಿದೆ. ರಾತ್ರಿ 11.20ರ ಹೊತ್ತಿಗೆ ರಸ್ತೆ ಬದಿಯಲ್ಲಿ ಕಾರು ಹೊತ್ತಿ ಉರಿಯುತ್ತಿರುವುದನ್ನು ಸಾರ್ವಜನಿಕರು ಗಮನಿಸಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಶಿವಮೊಗ್ಗದಿಂದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಕಾರು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಬರುತ್ತಿತ್ತು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ – ಕುಂದಾಪುರಕ್ಕೆ ಹೋಗಲು ಶಿವಮೊಗ್ಗದಲ್ಲಿ ಪತಿ ಜೊತೆ ಬಸ್ ಹತ್ತಿದ ಮಹಿಳೆ, ಸೀಟ್ ಸಿಕ್ಕ ತಕ್ಷಣ ಕಾದಿತ್ತು ಶಾಕ್
ಇನ್ನು ಕಾರು ಹೊತ್ತಿ ಉರಿಯುವಾಗ ಅದೇ ದಾರಿಯಲ್ಲಿ ಬರುತ್ತಿದ್ದ ಇತರೆ ವಾಹನಗಳಲ್ಲಿದ್ದವರು ವಿಡಿಯೋ ಚಿತ್ರೀಕರಿಸಿದ್ದಾರೆ. ಈ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಕಾರು ಯಾರದ್ದು ಎಂಬ ಪರಿಶೀಲನೆ ನಡೆಯುತ್ತಿದೆ.