ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 7 ಡಿಸೆಂಬರ್ 2021
ಏಕಾಏಕಿ ಗ್ರಾಮ ಪಂಚಾಯಿತಿ ಕಚೇರಿಯೊಳಗೆ ನುಗ್ಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ವಿರುದ್ಧ ನಿಂದಿಸಿ, ದಾಖಲೆಗಳನ್ನು ಚೆಲ್ಲಾಪಿಲ್ಲಿ ಮಾಡಿದ ಹಿನ್ನೆಲೆ ವ್ಯಕ್ತಿಯೊಬ್ಬರ ವಿರುದ್ಧ ದೂರು ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತೀರ್ಥಹಳ್ಳಿ ತಾಲೂಕು ಹಾದಿಗಲ್ಲು ಗ್ರಾಮ ಪಂಚಾಯಿತಿಯಲ್ಲಿ ಘಟನೆ ಸಂಭವಿಸಿದೆ. ಪಿಡಿಒ ಸುಂದರೇಶ ಅವರು ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಕಡತಗಳ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಗ್ರಾಮ ಪಂಚಾಯಿತಿ ಕಚೇರಿಗೆ ಬಂದ ಗುರುರಾಜ ಎಂಬುವವರು, ಪಿಡಿಒ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ್ದಾರೆ. ಅಲ್ಲದೆ ಟೇಬಲ್ ಮೇಲಿದ್ದ ಕಡತಗಳನ್ನು ಚಲ್ಲಾಪಿಲ್ಲಿ ಮಾಡಿದ್ದಾರೆ ಎಂದು ಆರೋಪಿಸಿ, ದೂರು ನೀಡಲಾಗಿದೆ.
ಈ ಸಂಬಂಧ ಮೇಲಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ದೂರು ನೀಡಲಾಗುತ್ತಿದೆ ಎಂದು ಪಿಡಿಒ ಸುಂದರೇಶ್ ದೂರಿನಲ್ಲಿ ತಿಳಿಸಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.