ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
FATAFAT NEWS, 19 AUGUST 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ಲೈವ್.ಕಾಂ : ಆನಂದಪುರ ಸಮೀಪದ ಇರುವಕ್ಕಿಯ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಎದುರು ಇರುವ 11 ಕೆ.ವಿ ವಿದ್ಯುತ್ ಲೈನ್ ಮೇಲೆ ಭಾನುವಾರ ದೊಡ್ಡ ಅಕೇಶಿಯಾ ಮರ ಬಿದ್ದು ತಂತಿ ತುಂಡಾಗಿದೆ. ಕಂಬ ಬಿರುಕು ಬಿಟ್ಟಿದೆ. ಆನಂದಪುರ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು. ಮೆಸ್ಕಾಂ ಕಚೇರಿ ಇಂಜಿನಿಯರ್ ಮತ್ತು ಸಿಬ್ಬಂದಿ ತ್ವರಿತವಾಗಿ ದುರಸ್ತಿ ಮಾಡಿದರು.ಮರ ಬಿದ್ದು ತುಂಡಾದ ವಿದ್ಯುತ್ ತಂತಿ
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ ⇒ ಶಿವಮೊಗ್ಗದಲ್ಲಿ ಅಶೋಕ ಚಕ್ರವಿಲ್ಲದ ಧ್ವಜ ಹಾರಿಸಿದ ವ್ಯಕ್ತಿ, ವಿಡಿಯೋ ವೈರಲ್, ದಾಖಲಾಯ್ತು ಕೇಸ್
ಶಿವಮೊಗ್ಗ ಲೈವ್.ಕಾಂ : ರಿಪ್ಪನ್‌ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಕೆರೆಹಳ್ಳಿ ಹಳ್ಳದ ಸಮೀಪ ಲಾರಿ ಅಪಘಾತವಾಗಿದೆ. ಮಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ಕಲ್ಲಿದ್ದಲು ತುಂಬಿದ ಲಾರಿಯು ಎದುರು ಬರುತ್ತಿದ್ದ ವಾಹನಕ್ಕೆ ದಾರಿಬಿಡುವ ವೇಳೆ ರಸ್ತೆ ಪಕ್ಕದ ಜಮೀನಿನಲ್ಲಿ ಇಳಿದು ಮರಕ್ಕೆ ಒರಗಿ ನಿಂತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.ಕಲ್ಲಿದ್ದಲು ತುಂಬಿದ್ದ ಲಾರಿ ಅಪಘಾತ
ಇದನ್ನೂ ಓದಿ ⇒ ದಿನ ಭವಿಷ್ಯ | 19 ಆಗಸ್ಟ್ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?
ಶಿವಮೊಗ್ಗ ಲೈವ್.ಕಾಂ : ಕುಡುಮಲ್ಲಿಗೆ ಸಮೀಪ ರಾಷ್ಟ್ರೀಯ ಹೆದ್ದಾರಿಯ ತಿರುವಿನಲ್ಲಿ ಕೋಳಿಗಳನ್ನು ಸಾಗಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದೆ. 50ಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿವೆ. ಶಿವಮೊಗ್ಗದ ಕಡೆಯಿಂದ ಉಡುಪಿ ಜಿಲ್ಲೆಗೆ ಹೊರಟಿದ್ದ ವಾಹನ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ವಾಹನ ಜಖಂಗೊಂಡಿದ್ದು, ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕೋಳಿ ಸಾಗಿಸುತ್ತಿದ್ದ ವಾಹನ ಪಲ್ಟಿ
ಇದನ್ನೂ ಓದಿ ⇒ ಜೋಗದಲ್ಲಿ ಬಸ್ಸಿಗೆ ಸಿಲುಕಿದ ಯುವಕ, ಗಂಭೀರ ಗಾಯ