ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | BUS | 23 ಏಪ್ರಿಲ್ 2022
ತೀರ್ಥಹಳ್ಳಿಯಲ್ಲಿ ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ಸಿಬ್ಬಂದಿಗಳ ನಡುವಿನ ಸಂಘರ್ಷ ಮುಂದುವರೆದಿದೆ. ನಿಲ್ದಾಣದೊಳಗೆ ಬಸ್ ಕೊಂಡೊಯ್ಯುವ ವಿಚಾರವಾಗಿ ಗಲಾಟೆಯಾಗಿದ್ದು, ಸರ್ಕಾರಿ ಬಸ್ ಕಂಡಕ್ಟರ್ ಮತ್ತು ಡ್ರೈವರ್ ಮೇಲೆ ಹಲ್ಲೆ ನಡೆಸಲಾಗಿದೆ.
ತೀರ್ಥಹಳ್ಳಿ ಬಸ್ ನಿಲ್ದಾಣದ ಮುಂಭಾಗ ಸರ್ಕಾರಿ ಮತ್ತು ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಗಲಾಟೆಯಾಗಿದೆ. ಇದು ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಏನಿದು ಗಲಾಟೆ?
ಶಿವಮೊಗ್ಗದಿಂದ ಉಡುಪಿಗೆ ತೆರಳುತ್ತಿದ್ದ ಕೆಎಸ್ಆರ್’ಟಿಸಿ ಬಸ್ಸು ತೀರ್ಥಹಳ್ಳಿ ಬಸ್ ನಿಲ್ದಾಣದೊಳಗೆ ತೆರಳುತ್ತಿತ್ತು. ಖಾಸಗಿ ಬಸ್ ಒಂದರ ಮಾಲೀಕ ಕೆಎಸ್ಆರ್’ಟಿಸಿ ಬಸ್ಸನ್ನು ತಡೆದು ನಿಲ್ಲಿಸಿದ್ದಾರೆ. ನಿಮ್ಮ ಬಸ್ಸು ಒಳಗೆ ಬರುವಂತಿಲ್ಲ ಎಂದು ತಾಕೀತು ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ತಮ್ಮ ಬಸ್ಸಿನಿಂದ ಕೆಎಸ್ಆರ್’ಟಿಸಿ ಬಸ್ಸಿಗೆ ಡಿಕ್ಕಿ ಹೊಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂದರ್ಭ ಕೆಎಸ್ಆರ್’ಟಿಸಿ ಬಸ್ ಡ್ರೈವರ್, ಕಂಡಕ್ಟರ್ ಮತ್ತು ಖಾಸಗಿ ಬಸ್ ಮಾಲೀಕ, ಚಾಲಕ, ನಿರ್ವಾಹಕ, ಏಜೆಂಟ್ ನಡುವೆ ಗಲಾಟೆಯಾಗಿದೆ. ಕೆಎಸ್ಆರ್’ಟಿಸಿ ಬಸ್ ಚಾಲಕ ಕೃಷ್ಣಪ್ಪ, ಕಂಡಕ್ಟರ್ ರುದ್ರಾಚಾರಿ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಾಗಳುಗಳಿಗೆ ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.
ಘಟನೆ ಸಂಬಂಧ ಖಾಸಗಿ ಬಸ್ ಮಾಲೀಕ, ಚಾಲಕ, ನಿರ್ವಾಹಕ, ಏಜೆಂಟ್ ಮತ್ತು ಇತರೆ ನಾಲ್ವರ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ | ಮಕ್ಕಳ ಅಶ್ಲೀಲ ವಿಡಿಯೋ ಅಪ್ ಲೋಡ್ ಮಾಡಿದ ದುಮ್ಮಳ್ಳಿಯ ಯುವಕನಿಗೆ ಜೈಲು, ದಂಡ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422