ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 6 ಜುಲೈ 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಕರೋನ ಲಸಿಕೆ ನೀಡುವ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಕೈ ಕೈ ಮಿಲಾಯಿಸಿದ್ದಾರೆ. ಘಟನೆ ಬಳಿಕ ಎರಡು ಪಕ್ಷದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಇದರಿಂದ ತೀರ್ಥಹಳ್ಳಿಯಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು.
ಏನಿದು ಘಟನೆ? ಗಲಾಟೆಗೇನು ಕಾರಣ?
ತೀರ್ಥಹಳ್ಳಿಯ ಸೀಬಿನಕೆರೆ ಶಾಲೆಯಲ್ಲಿ ಕರೋನ ಲಸಿಕೆ ವಿತರಣೆ ಸಂದರ್ಭ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯಾಗಿದೆ. ಬಿಜೆಪಿಯವರು ಸೂಚಿಸಿದವರಿಗೆ ಮಾತ್ರ ಲಸಿಕೆ ನೀಡಲಾಗುತ್ತಿದೆ ಎಂದು ಕಾಂಗ್ರೆಸ್ ಕಾರ್ಯಕರ್ತ ನಮ್ರತ್ ಆಕ್ಷೇಪಣೆ ತೆಗೆದಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗಲಾಟೆಯಾಗಿದ್ದು ನಮ್ರತ್, ಬಿಜೆಪಿಯ ದಯಾನಂದ್, ವಿಶ್ವನಾಥ ಗಾಣಿಗ, ನಾಗರಾಜ್ ಆಸ್ಪತ್ರೆಗೆ ದಾಖಲಾಗಿದ್ದು, ದೂರು, ಪ್ರತಿದೂರು ನೀಡಿದ್ದಾರೆ.
ಸಂಜೆ ಹೊಟೇಲ್‍ನಲ್ಲಿ ಕಿರಿಕ್
ತೀರ್ಥಹಳ್ಳಿಯ ಮುಖ್ಯ ಬಸ್ ನಿಲ್ದಾಣದ ಬಳಿ ಹೊಟೇಲ್‍ನಲ್ಲಿ ಉಪಾಹಾರ ಸೇವಿಸುತ್ತಿದ್ದ ಯುವ ಕಾಂಗ್ರೆಸ್ ಮುಖಂಡ ಸುಭಾಷ್ ಕುಲಾಲ್ ಮೇಲೆ ಕೆಲ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದು ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿತು. ದಿಢೀರ್ ಪ್ರತಿಭಟನೆಗೆ ಕಾರಣವಾಯಿತು.

ರಸ್ತೆಗಿಳಿದ ಮಾಜಿ ಸಚಿವರು
ಘಟನೆಗೆ ಕಾರಣರಾದ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಗಾಂಧಿ ಚೌಕದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಿಜೆಪಿ ಕಾರ್ಯಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಹೋರಾಟ ತೀವ್ರ ಸ್ವರೂಪ ಪಡೆಯಲಿದೆ ಎಂದು ಎಚ್ಚರಿಸಿದಾಗ, ಮಧ್ಯ ಪ್ರವೇಶಿಸಿದ ಡಿವೈಎಸ್‍ಪಿ ಶಾಂತವೀರಪ್ಪ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು.

ಪ್ರತಿಭಟಿಸಿದ ಬಿಜೆಪಿ ಮುಖಂಡರು
ಕಾಂಗ್ರೆಸ್ ಕಾರ್ಯಕರ್ತರ ಪ್ರತಭಟನೆ ಮುಗಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಆಸ್ಪತ್ರೆಗೆ ಆರಗ ಭೇಟಿ
ಇನ್ನು, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಾಸಕ ಆರಗ ಜ್ಞಾನೇಂದ್ರ ಅವರು ಜೆ.ಸಿ.ಆಸ್ಪತ್ರೆಗೆ ಭೇಟಿ ನೀಡಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವಿನ ಗಲಾಟೆ ವಿಚಾರ ತೀರ್ಥಹಳ್ಳಿ ಪಟ್ಟಣದಲ್ಲಿ ಕೆಲ ಹೊತ್ತು ಬಿಗುವಿನ ವಾತಾವರಣ ನಿರ್ಮಿಸಿತು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






