ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 APRIL 2023
SHIMOGA : ಎರಡು ದಿನದ ಸಭೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ (Candidate List) ಬಿಡುಗಡೆ ಮಾಡಲಾಗುತ್ತದೆ. ಪ್ರಜಾಪ್ರಭುತ್ವ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿಜೆಪಿಯಲ್ಲಿ ಕೆಳ ಹಂತದ ಕಾರ್ಯಕರ್ತರು, ಜನರ ಭಾನವೆಗಳನ್ನು ಅರಿತು ಅಭ್ಯರ್ಥಿಗಳ (Candidate List) ಆಯ್ಕೆ ಮಾಡಲಾಗುತ್ತಿದೆ. ಜಿಲ್ಲೆ, ತಾಲೂಕು ಹಂತದ ಸಮಿತಿಗಳ ಜೊತೆಗೆ ಚರ್ಚೆ ನಡೆಸಲಾಗಿದೆ. ಇನ್ನೆರಡು ದಿನದ ಸಭೆ ಬಳಿಕ ಅಭ್ಯರ್ಥಿಗಳನ್ನು ಪ್ರಕಟಿಸಲಾಗುತ್ತದೆ ಎಂದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಉದ್ಘಾಟನಾ ಕಾರ್ಯಕ್ರಮಕ್ಕೆ ಬಳಕೆಯಾದ KSRTC ಬಸ್ಸುಗಳೆಷ್ಟು? ಅವುಗಳ ಬಾಡಿಗೆ ಕಟ್ಟಿದ್ಯಾರು?
ಕಾಂಗ್ರೆಸ್ ಪಕ್ಷದಲ್ಲಿ ಸುಮಾರು 60 ಕ್ಷೇತ್ರಕ್ಕೆ ಸೂಕ್ತ ಅಭ್ಯರ್ಥಿ ಇಲ್ಲ. ಬೇರೆಡೆ ಅಭ್ಯರ್ಥಿಗಳನ್ನು ಕರೆದುಕೊಂಡು ಟಿಕೆಟ್ ಕೊಡುವ ಪ್ರಯತ್ನ ಮಾಡುತ್ತಿದ್ದಾರೆ. ಹೊರಗೆ ಶೂರುತ್ವದ ಮಾತನಾಡುತ್ತಿದ್ದಾರೆ. ಆದರೆ ಅವರಿಗೆ ಅಭ್ಯರ್ಥಿಗಳಿಲ್ಲ. ಸ್ಪಷ್ಟ ನೀತಿಗಳು ಇಲ್ಲ. ಕೇವಲ ಉಡಾಫೆ ಮಾತುಗಳಿಂದ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ಕಾಂಗ್ರೆಸ್ ಪಕ್ಷ ಕಳೆದ ಬಾರಿಗಿಂತಲೂ ಹೀನಾಯವಾಗಿ ಸೋಲನುಭವಿಸಲಿದೆ ಎಂದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಡುರಾತ್ರಿ ಚೆಕ್ಪೋಸ್ಟ್ ಬಳಿ ಕಾರು ಬಿಟ್ಟು ಇಬ್ಬರು ಎಸ್ಕೇಪ್, ಡೋರ್ ತೆಗೆದ ಪೊಲೀಸರಿಗೆ ಶಾಕ್