ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀರ್ಥಹಳ್ಳಿಗೆ ಭೇಟಿ, ಅಧಿಕಾರಿಗಳಿಂದ ಸ್ಥಳ ಪರಿಶೀಲನೆ, ಯಾವಾಗ ಬರ್ತಾರೆ?

ಶಿವಮೊಗ್ಗ: ಮುಖ್ಯಮಂತ್ರಿಯಾದ ಬಳಿಕ ಡಿ.ಕೆ. ಶಿವಕುಮಾರ್ ಇದೇ ಮೊದಲ ಬಾರಿ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಸೆ.19 ರಂದು ತೀರ್ಥಹಳ್ಳಿಗೆ ಭೇಟಿ ನೀಡಲಿದ್ದು, ಕಸ್ತೂರಿ ರಂಗನ್ ವರದಿ ಕುರಿತಂತೆ ಪ್ರಮುಖ ಸಭೆ ನಡೆಸಲಿದ್ದಾರೆ.

ಸೆ.19ರಂದು ಬೆಳಿಗ್ಗೆ 10 ಗಂಟೆಗೆ ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದ ಹೆಲಿಪ್ಯಾಡ್‌ಗೆ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೆಲಿಕಾಪ್ಟರ್‌ನಲ್ಲಿ ಆಗಮಿಸಲಿದ್ದಾರೆ. ತಾಲೂಕಿನ ಅತಿಥಿ ಗೃಹದಲ್ಲಿ ಕಸ್ತೂರಿ ರಂಗನ್ ವರದಿ ಸಂಬಂಧ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12:30ಕ್ಕೆ ಹೆಲಿಪ್ಯಾಡ್ ಮೂಲಕ ಬಾಳೆಹೊನ್ನೂರಿಗೆ ತೆರಳಿ ಅಲ್ಲಿಯೂ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

CM-DK-Shivakumar-to-visit-Thirthahalli-DC-SP-visit-for-venue-inspection

ಡಿಸಿ, ಎಸ್‌ಪಿಯಿಂದ ಪರಿಶೀಲನೆ

ಇನ್ನು, ಸಿಎಂ ಭೇಟಿ ಹಿನ್ನೆಲೆ ಜಿಲ್ಲಾಧಿಕಾರಿ ಪ್ರಭಲಿಂಗ ಕವಳಿಕಟ್ಟಿ, ಜಿಲ್ಲಾ ಪಂಚಾಯಿತಿ ಸಿಇಒ ಎನ್‌.ಹೇಮಂತ್‌, ಜಿಲ್ಲಾ ರಕ್ಷಣಾಧಿಕಾರಿ ಬಿ.ನಿಖಿಲ್‌ ಅವರು ತೀರ್ಥಹಳ್ಳಿಗೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಹೆಲಿಕಾಪ್ಟರ್‌ ಲ್ಯಾಂಡಿಂಗ್‌ ಮತ್ತು ಸಭೆಯ ಸ್ಥಳ ಪರಿಶೀಲಿಸಿದರು. ಭದ್ರತೆ ಕುರಿತು ಚರ್ಚೆ ನಡೆಸಿದರು.