ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 2 JUNE 2021
ಕರೋನ ಸಂಕಷ್ಟ ಕಾಲದಲ್ಲಿ ಜನರ ಹಸಿವು ನೀಗಿಸಲು ತಾಲೂಕು ಕಾಂಗ್ರೆಸ್ ಘಟಕದ ವತಿಯಿಂದ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಇಂದಿರಾ ಕ್ಯಾಂಟೀನ್‍ಗೆ ಇವತ್ತು ಚಾಲನೆ ನೀಡಿದರು.
ಹೈಸ್ಕೂಲ್ ರಸ್ತೆಯಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಬೆಳಗ್ಗೆ ಉಪಹಾರ, ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಸಲಾಗಿದೆ. ಬೆಳಗ್ಗೆ 8 ಗಂಟೆಯಿಂದ 9.30ರವರೆಗೆ ಉಪಹಾರ ಇರುತ್ತದೆ. ಮಧ್ಯಾಹ್ನ 12.30ರಿಂದ 2 ಗಂಟೆವರೆಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಜನರು ಉಚಿತವಾಗಿ ಆಹಾರ ಸೇವಿಸಬಹುದಾಗಿದೆ.
ಇಂದಿರಾ ಕ್ಯಾಂಟೀನ್ ಉದ್ಘಾಟನೆ ಬಳಿಕ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಸರ್ಕಾರಿ ಆಸ್ಪತ್ರೆ ಬಳಿ ಸಮಾನ ಮನಸ್ಕರು ಸೇರಿ ಉಚಿತ ಊಟದ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು. ಕೊನೆಗೆ ಬಿಜೆಪಿಯವರಷ್ಟೆ ಅಲ್ಲಿ ಸೇರಿಕೊಂಡರು. ನಾನೆ ಹೋಗಿ ಕಳಿದರೂ ನಮ್ಮವರನ್ನು ಸೇರಿಸಿಕೊಳ್ಳಲಿಲ್ಲ. ಆ ಕಾರಣಕ್ಕಾಗಿ ನಾವು ಪ್ರತ್ಯೇಕವಾಗಿ ಇಂದಿರಾ ಕ್ಯಾಂಟೀನ್ ಆರಂಭಿಸಿದ್ದೇವೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಸ್ತೂರು ಮಂಜುನಾಥ್ , ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬ ರಾಘವೇಂದ್ರ, ಯೂತ್ ಕಾಂಗ್ರೆಸ್ ಅಧ್ಯಕ್ಷ ಅಮರನಾಥ್ ಶೆಟ್ಟಿ, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ವಿಲಿಯಂ, ಕಾಂಗ್ರೆಸ್ ಮುಖಂಡರಾದ ಅಮ್ರಪಾಲಿ ಸುರೇಶ್, ವಾದಿರಾಜ್ ಭಟ್, ಆದರ್ಶ್ ಹುಂಚದಕಟ್ಟೆ ಹಾಗೂ ಪಟ್ಟಣ ಪಂಚಾಯತಿಯ ಸದಸ್ಯರು ಉಪಸ್ಥಿತರಿದ್ದರು.
ಲಕ್ಷಣ ಕಂಡು ಬಂದ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಿ. ಶಿವಮೊಗ್ಗದಲ್ಲಿ ಸುರಕ್ಷಿತವಾಗಿ ಕೋವಿಡ್ ಪರೀಕ್ಷೆಗೆ ಫೋನ್ ಮಾಡಿ, ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422