ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಡಿಸೆಂಬರ್ 2021
ನಂದಿತಾ ಪ್ರಕರಣ ಮಾದರಿಯಲ್ಲೇ ತೀರ್ಥಹಳ್ಳಿಯಲ್ಲಿ ಕೋಮುಗಲಭೆ ಸೃಷ್ಟಿಸಿ ಮುಂದಿನ ಚುನಾವಣೆ ಗೆಲ್ಲಲು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹುನ್ನಾರ ನಡೆಸಿದ್ದಾರೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆರೋಪಿಸಿದ್ದಾರೆ.
ಗೋವುಗಳ ಕಳ್ಳಸಾಗಣೆ ಖಂಡಿಸಿ ತೀರ್ಥಹಳ್ಳಿ ತಾಲೂಕು ಕಚೇರಿ ಮುಂದೆ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು, 2013ರಲ್ಲಿ ಬಾಲಕಿ ನಂದಿತಾ ಸಾವಿನ ಪ್ರಕರಣವನ್ನು ತಿರುಚಿ 2018ರಲ್ಲಿ ಆರಗ ಜ್ಞಾನೇಂದ್ರ ಅವರು ಗೆಲುವು ಸಾಧಿಸಿದ್ದರು. ಈಗ 2023ರ ಚುನಾವಣೆಗಾಗಿ ಕ್ಷೇತ್ರದಲ್ಲಿ ಕೋಮುಗಲಭೆ ಸೃಷ್ಟಿಸಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ | ಗೃಹ ಸಚಿವರ ತವರು ಕ್ಷೇತ್ರದಲ್ಲೇ ಹಿಂದೂ ಪರ ಸಂಘಟನೆಗಳಿಂದ ಪೊಲೀಸರ ವಿರುದ್ಧ ಆಕ್ರೋಶ, ರಸ್ತೆ ತಡೆ, ಯಾರೆಲ್ಲ ಏನೇನು ಹೇಳಿದರು?
ಯಾರ ವಿರುದ್ಧ ಪ್ರತಿಭಟನೆ?
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವಿದೆ. ಇಂತಹ ಸಂದರ್ಭ ಬಿಜೆಪಿಯವರು ಪ್ರತಿಭಟನೆ ನಡೆಸುವುದೇಕೆ, ಯಾರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಜನರನ್ನು ಕತ್ತಲೆಗೆ ತಳ್ಳಿ ಗಲಭೆ ಸೃಷ್ಟಿಸುವ ಹುನ್ನಾರ ನಡೆಯುತ್ತಿದೆ. ಕೇಂದ್ರ, ರಾಜ್ಯದಲ್ಲಿ ಯಾರ ಸರ್ಕಾರವಿದೆ ಎಂಬುದನ್ನು ಆರ್.ಎಸ್.ಎಸ್ ಜನರಿಗೆ ಉತ್ತರಿಸಬೇಕು ಎಂದು ಕಿಮ್ಮನೆ ರತ್ನಾಕರ್ ಆಗ್ರಹಿಸಿದರು.
ಬೃಹತ್ ಪ್ರತಿಭಟನೆ, ಉಪವಾಸ
ಗೋವುಗಳ ಕಳ್ಳ ಸಾಗಣೆ, ಹಲ್ಲೆ ಪ್ರಕರಣ, ಬಿಜೆಪಿಯ ಪಿತೂರಿ ಖಂಡಿಸಿ ಡಿಸೆಂಬರ್ 20ರಂದು ತಾಲೂಕು ಕಚೇರಿ ಮುಂದೆ, ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ, ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಎಂದು ಕಿಮ್ಮನೆ ರತ್ನಾಕರ್ ತಿಳಿಸಿದರು.
ಇದೆ ವೇಳೆ, ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ತೀರ್ಥಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬ ರಾಘವೇಂದ್ರ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಸದಸ್ಯರಾದ ರಹಮತುಲ್ಲಾ ಅಸಾದಿ, ಯುವ ಕಾಂಗ್ರೆಸ್ ಕಾಂಗ್ರೆಸ್ ಅಧ್ಯಕ್ಷ ಅಮರನಾಥ ಶೆಟ್ಟಿ, ಪ್ರಮುಖರಾದ ಜೈಕರ ಶೆಟ್ಟಿ, ಸುಶೀಲಾ ಶೆಟ್ಟಿ, ಗೀತಾ ರಮೇಶ್, ಮಂಜುಳಾ, ಅಮ್ರಪಾಲಿ ಸುರೇಶ್, ಕೆಳಕೆರೆ ಪೂರ್ಣೇಶ್ ಸೇರಿದಂತೆ ಹಲವರು ಇದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422