ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI | 10 ಡಿಸೆಂಬರ್ 2019
ಕೋಣಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೇಲೆ ಬಿಜೆಪಿ ಮುಖಂಡರು ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಇವತ್ತು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ತಾಲೂಕು ಪಂಚಾಯಿತಿ ಮುಂದೆ ಪ್ರತಿಭಟನಾ ಸಭೆ ನಡೆಸಿದ ಕಾಂಗ್ರೆಸ್ ಮುಖಂಡರು, ಸಭೆಯೊಂದರಲ್ಲಿ ಕೋಣಂದರೂ ಜಿಲ್ಲಾ ಪಂಚಾಯಿತಿ ಸದಸ್ಯೆಯ ಪತಿ ಪೂರ್ಣೇಶ್ ಅವರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಶಾಲಾ ಪ್ರಫುಲ್ಲಚಂದ್ರ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು
ಮಾಜಿ ಮಿನಿಸ್ಟರ್ ನೇತೃತ್ವದಲ್ಲಿ ಪ್ರತಿಭಟನೆ
ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೇಲೆ ನಡೆದಿರುವ ಹಲ್ಲೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ವಿಫಲವಾಗಿದ್ದಾರೆ. ಆದರೆ ಹಲ್ಲೆ ನಡೆಸಿದವರು ನೀಡಿದ ಸುಳ್ಳು ದೂರು ಸ್ವೀಕರಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ಬಿಜೆಪಿ ಮುಖಂಡರು ಮಹಿಳೆಯರ ಪರವಾಗಿ ಬಹಳ ಗೌರವವಿದೆ ಎಂದು ಹೇಳಿಕೊಂಡು ಓಡಾಡುತ್ತಾರೆ. ಆದರೆ ಮಹಿಳೆಯ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿದರು.
ಮಹಿಳೆಗೆ ಮಾಡಿದ ಅಪಮಾನ
ಕೋಣಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಶಾಲಾ ಪ್ರಫುಲ್ಲಚಂದ್ರ ಮಾತನಾಡಿ, ತಮ್ಮ ವಿರುದ್ಧ ಸುಳ್ಳು ಮೊಕದಮೆ ದಾಖಲಿಸಿ, ಠಾಣೆಯಿಂದ ಸುಮಾರು 50 ಜನರು ಬೆದರಿಕೆಯನ್ನು ಹಾಕಿದ್ದಾರೆ. ಈ ಕುರಿತು ನಾನು ಕೊಟ್ಟ ದೂರನ್ನು ಪೊಲೀಸರು ನಿರಾಕರಿಸಿದ್ದಾರೆ. ಇದು ಮಹಿಳೆಯೊಬ್ಬರಿಗೆ ಮಾಡಿದ ಅಪಮಾನವಾಗಿದೆ ಎಂದರು.
ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಜಿಲ್ಲಾ ಪಂಚಾಯಿತಿ ಸದಸ್ಯ ಶ್ವೇತಾ ಬಂಡಿ, ಭಾರತಿ ಪ್ರಭಾಕರ್, ಕೆಪಿಸಿಸಿ ಸದಸ್ಯೆ ಪ್ರಭಾವತಿ ಶಾಮಣ್ಣ, ಸುರೇಶ್, ಹೆಚ್.ದಿನೇಶ್, ತಾಲೂಕು ಪಂಚಾಯಿತಿ ಸದಸ್ಯೆ ಕೆಳಕೆರೆ ದಿವಾಕರ್, ಮಂಗಳಾಗೋಪಿ, ಕೆಸ್ತೂರು ಮಂಜುನಾಥ, ಎಂ.ರಾಘವೇಂದ್ರ, ಜಿ.ಎಸ್.ನಾರಾಯಣರಾವ್ ಸೇರಿದಂತೆ ಹಲವರು ಈ ವೇಳೆ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Congress Workers Protest against BJP leaders who allegedly assaulted Konanduru Grama Panchayath President. Former Minister Kimmane Rathnakar led the Protest.