ಶಿವಮೊಗ್ಗ ಲೈವ್.ಕಾಂ | SHIMOGA | 27 ಮಾರ್ಚ್ 2020
ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಕಾರಿನಲ್ಲಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ. ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಕ್ವಾರಂಟೈನ್ ವಿಭಾಗಕ್ಕೆ ಸೇರಿಸಲಾಗಿದೆ.
ಕರೋನ ಬಾದಿತ ಪ್ರದೇಶದಿಂದ ಬಂದಿರುವವರು 14 ದಿನ ಕಡ್ಡಾಯವಾಗಿ ಮನೆಯಲ್ಲಿ ಇರಬೇಕು ಎಂದು ಕಟ್ಟುನಿಟ್ಟು ಸೂಚನೆ ನೀಡಲಾಗಿದೆ. ಹೀಗಿದ್ದು ತೀರ್ಥಹಳ್ಳಿ ತಾಲೂಕು ಬಸವಾನಿ ಗ್ರಾಮದ ಕಿರಣ ಎಂಬುವವರು ಮನೆಯಲ್ಲಿ ಇರದೆ ಹೊರಗೆ ಸುತ್ತಾಡುತ್ತಿದ್ದರು. ಈ ಕುರಿತು ಎಚ್ಚರಿಕೆ ನೀಡಲಾಗಿತ್ತು.
ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಆಶಾಲತಾ ಅವರು ಪರಿಶೀಲನೆ ವೇಳೆ, ಕಿರಣ್ ಅವರು ಕಾರಿನಲ್ಲಿ ಹೊರಗೆ ಸುತ್ತಾಡುತ್ತಿದ್ದದ್ದು ಬೆಳಕಿಗೆ ಬಂದಿದೆ. ಒಂದು ವೇಳೆ ಕಿರಣ್ ಅವರಿಗೆ ಸೋಂಕು ತಗುಲಿದ್ದರೆ, ಇತರರಿಗೂ ಅದು ಹರಡುವ ಸಾದ್ಯತೆ ಇದೆ. ಹಾಗಾಗಿ ಕಿರಣ್ ಅವರನ್ನು ವಶಕ್ಕೆ ಪಡೆದು, ಹಾಸ್ಪಿಟಲ್ ಕ್ವಾರಂಟೈನ್’ನಲ್ಲಿ ಇಡಲಾಗಿದೆ. ಸದ್ಯ ಅವರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಅಲ್ಲದೆ, ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188 ಅನ್ವಯ ಪ್ರಕರಣ ದಾಖಲಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200