ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 11 ಜುಲೈ 2020
ತಿಥಿ ಕಾರ್ಯಕ್ಕೆ ಬೆಂಗಳೂರಿನಿಂದ ಬಂದಿದ್ದ ವ್ಯಕ್ತಿ ಸೇರಿ ನಾಲ್ಕು ಮಂದಿಯಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಹಾಗಾಗಿ ಗ್ರಾಮವೊಂದರಲ್ಲಿ ಸೀಲ್ ಡೌನ್ ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕು ಕನ್ನಂಗಿ ಸಮೀಪದ ಕಳ್ಳಿಗದ್ದೆಯಲ್ಲಿ ನಾಲ್ಕು ಮಂದಿಗೆ ಕರೋನ ದೃಢವಾಗಿದೆ. ಇತ್ತೀಚೆಗೆ ಮೃತರಾಗಿದ್ದ ಮಹಿಳೆಯೊಬ್ಬರ ತಿಥಿ ಕಾರ್ಯದಲ್ಲಿ ಭಾಗವಹಿಸಲು ಬೆಂಗಳೂರಿನಿಂದ ಇಬ್ಬರು ಬಂದಿದ್ದರು. ಇವರಲ್ಲಿ ಒಬ್ಬರಿಗೆ ಸೋಂಕು ತಗುಲಿರುವ ಸಾದ್ಯತೆ ಇದೆ.

ಬೆಂಗಳೂರಿನಿಂದ ಬಂದ ವ್ಯಕ್ತಿಯಿಂದ ಉಳಿದ ಮೂವರಿಗೆ ಸೋಂಕು ಹರಡಿರುವ ಕುರಿತು ಶಂಕೆ ಇದೆ. 8 ವರ್ಷದ ಬಾಲಕಿ ಸೇರಿ ನಾಲ್ಕು ಮಂದಿಗೆ ಸೋಂಕು ತಗುಲಿರುವು ಶುಕ್ರವಾರ ದೃಢಪಟ್ಟಿದೆ. ಹಾಗಾಗಿ ನಾಲ್ಕು ಮಂದಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಳ್ಳಿಗದ್ದೆ ಗ್ರಾಮದಲ್ಲಿ 9 ಮನೆಗಳನ್ನು ಕಂಟೈನ್ಮೆಂಟ್ ಜೋನ್ ಮತ್ತು 11 ಮನೆಗಳನ್ನು ಬಫರ್ ಜೋನ್ ಎಂದು ಗುರುತಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು





