ಶಿವಮೊಗ್ಗ ಲೈವ್.ಕಾಂ | 30 ನವೆಂಬರ್ 2018
ಜಿಲ್ಲಾಧಿಕಾರಿ ನೇತೃತ್ವದಲ್ಲಿ ಎರಡನೇ ಹಂತದ ಜನತಾದರ್ಶನ ಮತ್ತು ಗ್ರಾಮ ವಾಸ್ತವ್ಯ ಆರಂಭವಾಗಿದೆ. ಆಗುಂಬೆಯಲ್ಲಿ ಇವತ್ತು ಜಿಲ್ಲಾಧಿಕಾರಿ ಮತ್ತು ಎಲ್ಲ ಇಲಾಖೆಯ ಅಧಿಕಾರಿಗಳು ಜನತಾ ದರ್ಶನದಲ್ಲಿ ಪಾಲ್ಗೊಂಡಿದ್ದಾರೆ.
![]() |
ಎಲ್ಲಿ ಜನತಾದರ್ಶನ?
ಆಗುಂಬೆ ಹೋಬಳಿಯಲ್ಲಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ನೇತೃತ್ವದಲ್ಲಿ ಜನತಾ ದರ್ಶನ ನಡೆಯುತ್ತಿದೆ. ಈ ಭಾಗದ ಜನರು ಜಿಲ್ಲಾಧಿಕಾರಿ ಅವರಿಗೆ ತಮ್ಮ ಅಹವಾಲು ಸಲ್ಲಿಸುತ್ತಿದ್ದಾರೆ. ಆಗುಂಬೆಯಲ್ಲಿ ಹೆಚ್ಚಾಗಿರುವ ಕಾಡು ಪ್ರಾಣಿಗಳ ಸಮಸ್ಯೆ, ಕುಂಟಿತ ಅಭಿವೃದ್ಧಿ ಕುರಿತು ಬಹುತೇಕರು ಅಹವಾಲು ಸಲ್ಲಿಸುತ್ತಿದ್ದಾರೆ. ಪ್ರತೀ ಅಹವಾಲು ಸ್ವೀಕರಿಸುತ್ತಿರುವ ಜಿಲ್ಲಾಧಿಕಾರಿ ದಯಾನಂದ್ ಅವರು, ಸ್ಥಳದಲ್ಲೇ ಜನರ ಸಮಸ್ಯೆ ಬಗೆಹರಿಸುವ ಕುರಿತು ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸುತ್ತಿದ್ದಾರೆ. ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಜನತಾ ದರ್ಶನದಲ್ಲಿದ್ದಾರೆ.
ರಾಮೇಶ್ವರ ದೇವಸ್ಥಾನದಲ್ಲಿ ಪೂಜೆ
ಜಿಲ್ಲಾಧಿಕಾರಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು ಕೆಎಸ್ಆರ್’ಟಿಸಿ ಬಸ್ ಮೂಲಕ ತೀರ್ಥಹಳ್ಳಿಗೆ ಆಗಮಿಸಿದರು. ಇಲ್ಲಿನ ಪುರಾಣ ಪ್ರಸಿದ್ಧ ರಾಮೇಶ್ವರ ದೇವಸ್ಥಾದನಲ್ಲಿ ಪೂಜೆ ಸಲ್ಲಿಸಿದರು. ಬಳಿಕ ಶಾಸಕ ಆರಗ ಜ್ಞಾನೇಂದ್ರ ಮತ್ತು ಹಿರಿಯ ಅಧಿಕಾರಿಗಳ ಜೊತೆಗೆ ಜಿಲ್ಲಾಧಿಕಾರಿ ಸಮಾಲೋಚನೆ ನಡೆಸಿದರು. ನಂತರ ಅಧಿಕಾರಿಗಳ ಜೊತೆಗೆ ಆಗುಂಬೆಗೆ ತೆರಳಿದರು.
ಆಗುಂಬೆಯಲ್ಲೇ ರಾತ್ರಿ ವಾಸ್ತವ್ಯ
ಜನತಾದರ್ಶನದ ಬಳಿಕ ಜಿಲ್ಲಾಧಿಕಾರಿ ದಯಾನಂದ್ ಮತ್ತು ಹಿರಿಯ ಅಧಿಕಾರಿಗಳು ಗ್ರಾಮವಾಸ್ತವ್ಯ ಮಾಡಲಿದ್ದಾರೆ. ಹುರುಳಿ ಗ್ರಾಮದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯೂ ಗ್ರಾಮಸ್ಥರಿಂದ ಅಹವಾಲುಗಳನ್ನು ಸ್ವೀಕರಿಸಲಾಗುತ್ತದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಕರೆ ಮಾಡಿ | 9964634494
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200