ತೀರ್ಥಹಳ್ಳಿ ಬಾಲಕ ಸಾವು ಪ್ರಕರಣ, ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಆದೇಶ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಮಂಗನ ಕಾಯಿಲೆಯಿಂದ (KFD) ತೀರ್ಥಹಳ್ಳಿಯ ಬಾಲಕ ಸಾವು ಪ್ರಕರಣದ ತನಿಖೆ ನಡೆಸಿ ವರದಿ ನೀಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದ್ದಾರೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಜನಿವಾರ ವಿವಾದಕ್ಕೆ ಟ್ವಿಸ್ಟ್‌, ಅಧಿಕಾರಿ ವಿರುದ್ಧ ಕಂಪ್ಲೇಂಟ್‌, ಈತನಕ ಏನೇನಾಗಿದೆ? ಇಲ್ಲಿದೆ ಡಿಟೇಲ್ಸ್‌

ತೀರ್ಥಹಳ್ಳಿ ತಾಲೂಕು ಕೋಣಂದೂರು ಸಮೀಪದ ದತ್ತರಾಜಾಪುರ ಗ್ರಾಮದ ರಚಿತ್‌ಗೆ ಕೆಎಫ್‌ಡಿ ಸೋಂಕು ತಗುಲಿತ್ತು. ಗುರುವಾರ ರಾತ್ರಿ ಮಣಿಪಾಲದ ಆಸ್ಪತ್ರೆಯಲ್ಲಿ ರಚಿತ್‌ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಈ ಪ್ರಕರಣ ಕುರಿತು ತನಿಖೆ ನಡೆಸಿ ವರದಿ ನೀಡಬೇಕು ಎಂದು ಸೂಚಿಸಿದ್ದಾರೆ.

ಇಲ್ಲಿದೆ ಪ್ರಕರಣದ ಪ್ರಮುಖಾಂಶ

  • ಏ.4ರಂದು ತೀವ್ರ ಜ್ವರದ ಹಿನ್ನೆಲೆ ರಚಿತ್‌ ಸಹೋದರಿ ರಮ್ಯಾಳನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಪರೀಕ್ಷಿಸಿದಾಗ ಕೆಎಫ್‌ಡಿ ಪಾಸಿಟಿವ್‌ ಬಂದಿತ್ತು.
  • ಏ.5ರಂದು ರಚಿತ್‌ಗೆ ಸುಸ್ತು ಮತ್ತು ವಾಂತಿಯಾದ ಹಿನ್ನೆಲೆ ಆತನನ್ನು ಜೆ.ಸಿ.ಆಸ್ಪತ್ರೆಗೆ ದಾಖಲಿಸಿದಾಗ ಕೆ.ಎಪ್‌.ಡಿ ದೃಢವಾಗಿತ್ತು.
  • ಏ.6ರಂದು ರಮ್ಯಾ ಮತ್ತು ರಚಿತ್‌ರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಯಿತು. ಎಬಿಎಆರ್‌ಕೆ ಯೋಜನೆ ಅಡಿ ಇಬ್ಬರಿಗು ಉಚಿತ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
  • ಗುಣವಾದ ಹಿನ್ನೆಲೆ ರಮ್ಯಾಳನ್ನು ಡಿಸ್ಚಾರ್ಜ್‌ ಮಾಡಲಾಯಿತು. ಆಕೆ ಮನೆಗೆ ಮರಳಿದ್ದಳು. ಏ.17ರ ರಾತ್ರಿ ಚಿಕಿತ್ಸೆ ಫಲಿಸದೆ ರಚಿತ್‌ ಕೊನೆ ಉಸಿರೆಳೆದಿದ್ದಾನೆ.
  • ಸಚಿವ ಮಧು ಬಂಗಾರಪ್ಪ, ಶಾಸಕ ಆರಗ ಜ್ಞಾನೇಂದ್ರ ಅವರು ರಚಿತ್‌ ಆರೋಗ್ಯದ ಕುರಿತು ವಿಚಾರಿಸಿದ್ದರು. ವೈದ್ಯರೊಂದಿಗು ಚರ್ಚೆ ನಡೆಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
  • ಏ.18ರಂದು ರಚಿತ್‌ ಸಾವಿನ ಕುರಿತು ಸಮಗ್ರ ವರದಿ ನೀಡುವಂತೆ ಜಿಲಾಧಿಕಾರಿ ಗುರುದತ್ತ ಹೆಗಡೆ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ಇದನ್ನೂ ಓದಿ » ಓಮ್ನಿ ಕಾರು ಅಡ್ಡಗಟ್ಟಿ ಲಕ್ಷ ಲಕ್ಷದ ಗುಜರಿ ವಸ್ತು ದರೋಡೆ, ನಾಲ್ವರು ಅರೆಸ್ಟ್‌, ಏನಿದು ಕೇಸ್‌?

Leave a Comment