ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 19 JUNE 2021
ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ತೀರ್ಥಹಳ್ಳಿ ಕಾಂಗ್ರೆಸ್ ವತಿಯಿಂದ ಆರಂಭಿಸಿರುವ ಇಂದಿರಾ ಕ್ಯಾಂಟೀನ್ ಮತ್ತು ಸೇವಾ ಸಿಂಧೂ ಯೋಜನೆ ಈಗ ರಾಜ್ಯದ ಕಾಂಗ್ರೆಸ್ ಮುಖಂಡರ ಗಮನ ಸೆಳದಿದೆ. ತೀರ್ಥಹಳ್ಳಿಗೆ ಭೇಟಿ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಅವರು, ಇವರೆಡೂ ಯೋಜನೆಗಳ ಕುರಿತು ಮಾಹಿತಿ ಪಡೆದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಇಂದಿರಾ ಕ್ಯಾಂಟೀನ್ ಮತ್ತು ಸೇವಾ ಸಿಂಧೂ ಯೋಜನೆಯ ನಿರ್ವಹಣೆ ಕುರಿತು ಕಾರ್ಯಕರ್ತರಿಂದ ಸಂಪೂರ್ಣ ಮಾಹಿತಿ ಪಡೆದರು. ಅಲ್ಲದೆ ಯೋಜನೆ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಕಾಂಗ್ರೆಸ್ ಕಾರ್ಯಕರ್ತರ ಕೆಲಸ ಜನಪರವಾಗಿದೆ. ಸರ್ಕಾರ ಮಾಡದಿರುವ ಕೆಲಸವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಿರುವುದು ಒಳ್ಳೆಯ ತೀರ್ಮಾನವಾಗಿದೆ. ಬಿಜೆಪಿ ಯಾವುದೆ ಜನಪರ ಕೆಲಸ ಮಾಡುತ್ತಿಲ್ಲ. ಜನರ ಕಣ್ಣೀರು ಒರೆಸುವ ಕೆಲಸ ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬ ರಾಘವೇಂದ್ರ, ಅಮ್ರಪಾಲಿ ಸುರೇಶ, ಅಮರನಾಥ ಶೆಟ್ಟಿ, ಪೂರ್ಣೇಶ್ ಕೆಳಕೆರೆ, ಪಟ್ಟಣ ಪಂಚಾಯಿತಿ ಸದಸ್ಯರಹಮತುಲ್ಲಾ ಅಸಾದಿ, ನಮ್ರತ್ ಕೋಳಿಕಾಲು ಗುಡ್ಡ, ಮಕ್ಸೂದ್, ಸತೀಶ್ ಶೆಟ್ಟಿ, ಆಸೀಫ್ ಸೀಬಿನಕೆರೆ, ಸುಶೀಲಾ ಶೆಟ್ಟಿ ಇನ್ನಿತರರು ಇದ್ದರು.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]