ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 MARCH 2021
ಶಿವಮೊಗ್ಗ ಜಿಲ್ಲೆಯ ಎರಡು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಯಾಗಿದೆ. ಘೋಷಣೆಯಾದ ದಿನಾಂಕದಂದು ಚುನಾವಣೆ ನಡೆಸುವಂತೆ ಚುನಾವಣಾ ಆಯೋಗ ಜಿಲ್ಲಾಧಿಕಾರಿ ಅವರಿಗೆ ಆದೇಶಿಸಿದೆ.

ಭದ್ರಾವತಿ ನಗರಸಭೆ ಮತ್ತು ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಗೆ ಚುನಾವಣಾ ದಿನಾಂಕ ನಿಗದಿಪಡಿಸಲಾಗಿದೆ. ಏಪ್ರಿಲ್ 27ರಂದು ಮತದಾನ ನಡೆಸುವಂತೆ ಚುನಾವಣಾ ಅಯೋಗ ಆದೇಶಿಸಿದೆ.
ಏಪ್ರಿಲ್ 8ರಂದು ಜಿಲ್ಲಾಧಿಕಾರಿಗಳು ಚುನಾವಣೆಗೆ ಅಧಿಸೂಚನೆ ಹೊರಡಿಸಬೇಕು.
ಏಪ್ರಿಲ್ 15ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಏಪ್ರಿಲ್ 16ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 19ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.
ಏಪ್ರಿಲ್ 27ರಂದು ಮತದಾನ ನಡೆಯಲಿದೆ. ಮರು ಮತದಾನ ಅವಶ್ಯಕತೆ ಇದ್ದರೆ ಏಪ್ರಿಲ್ 29ರಂದು ನಡೆಸಬಹುದಾಗಿದೆ.
ಎಪ್ರಿಲ್ 30ರಂದು ತಾಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಸಬೇಕು. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭಿಸಬೇಕು ಎಂದು ಚುನಾವಣಾ ಆಯೋಗ ಆದೇಶದಲ್ಲಿ ತಿಳಿಸಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






