ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆ, ಪರಶುರಾಮ ಕೊಂಡದಲ್ಲಿ ಪುಣ್ಯ ಸ್ನಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 11 JANUARY 2024

THIRTHAHALLI : ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ಇವತ್ತು ಪರಶುರಾಮ ಕೊಂಡದಲ್ಲಿ ಭಕ್ತರು ಪುಣ್ಯ ಸ್ನಾನ ಮಾಡಿದರು. ದೊಡ್ಡ ಸಂಖ್ಯೆಯ ಭಕ್ತರು ಪುಣ್ಯ ಸ್ನಾನದಲ್ಲಿ ಪಾಲ್ಗೊಂಡಿದ್ದರು.

ಪಲ್ಲಕ್ಕಿ ಪೂಜೆ ಬಳಿಕ ಪುಣ್ಯ ಸ್ನಾನ

ಎಳ್ಳಮಾವಾಸ್ಯೆ ಸಂದರ್ಭ ಇಲ್ಲಿ ತೀರ್ಥ ಸ್ನಾನ ಮಾಡಿದರೆ ಪಾಪ ನಿವಾರಣೆಯಾಗಲಿದೆ ಎಂಬುದು ಭಕ್ತರ ನಂಬಿಕೆ. ಹಾಗಾಗಿ ಬೆಳಗಿನ ಜಾವದಲ್ಲಿಯೇ ಭಕ್ತರು ದೊಡ್ಡ ಸಂಖ್ಯೆಯಲ್ಲಿ ಸರತಿಯಲ್ಲಿ ನಿಂತಿದ್ದರು. ಶ್ರೀ ರಾಮೇಶ್ವರ ದೇವರ ಪಲ್ಲಕ್ಕಿಯನ್ನು ರಾಮಕೊಂಡದ ಬಳಿ ಕೊಂಡೊಯ್ದು ಪೂಜೆ ಸಲ್ಲಿಸಲಾಯಿತು. ಆ ಬಳಿಕ ಭಕ್ತರಿಗೆ ಪುಣ್ಯ ಸ್ನಾನಕ್ಕೆ ಅವಕಾಶ ಕಲ್ಪಿಸಲಾಯಿತು. ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಭಕ್ತರು ತುಂಗಾ ನದಿಯ ದಂಡೆಗೆ ಆಗಮಿಸಿದ್ದರು.

ಕಿರು ಸೇತುವೆ ನಿರ್ಮಾಣ

ಪರಶುರಾಮ ಕೊಂಡಕ್ಕೆ ತೆರಳಲು ತುಂಗಾ ನದಿಯನ್ನು ಅಪಾಯಕಾರಿ ಸ್ಥಿತಿಯಲ್ಲಿ ದಾಟಬೇಕಿತ್ತು. ಈ ಬಾರಿ ಭಕ್ತರಿಗೆ ಸಮಸ್ಯೆ ಆಗದಿರಲೆಂದು 6.80 ಲಕ್ಷ ರೂ. ವೆಚ್ಚದಲ್ಲಿ ಕಿರು ಸೇತುವೆ ನಿರ್ಮಿಸಲಾಗಿದೆ. ಹಾಗಾಗಿ ಭಕ್ತರು ಮತ್ತು ದೇವರ ಪಲ್ಲಕ್ಕಿಯನ್ನು ಪರಶುರಾಮ ಕೊಂಡದವರೆಗೆ ಸುಲಭವಾಗಿ ತಲುಪುವಂತಾಯಿತು.

ದೇವರಿಗೆ ವಿಶೇಷ ಅಲಂಕಾರ, ಪೂಜೆ

ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ತೀರ್ಥ ಸ್ನಾನದ ಬಳಿಕ ಭಕ್ತರು ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಎಳ್ಳಮಾವಾಸ್ಯೆ ಜಾತ್ರೆ ಅಂಗವಾಗಿ ‍ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಮಂಗಳವಾರದಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿವೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಕ್ತಿ ದೇವತೆಗಳ ಸಮಾಗಮ, ಹರಿದು ಬಂತು ಭಕ್ತ ಸಾಗರ, ಹೇಗಿತ್ತು ವೈಭವ? | ಫೋಟೊ ನ್ಯೂಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 11, 2024

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

Leave a Comment