ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | THIRTHAHALLI NEWS | 20 ಜನವರಿ 2022
ಅಬಕಾರಿ ಇಲಾಖೆ ಅಧಿಕಾರಿಗಳು ತೀರ್ಥಹಳ್ಳಿಯ ವಿವಿಧೆಡೆ ದಾಳಿ ನಡೆಸಿ, ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಲಕ್ಷಾಂತರ ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಲ್ಲಿನ ಇಂದಿರಾನಗರ, ಮಾರಿಗುಣಿ, ತಲ್ಲೂರು ಅಂಗಡಿ ಕೈಮರ ಗ್ರಾಮಗಳಲ್ಲಿ ದಾಳಿ ನಡೆಸಲಾಗಿದೆ. ಅಂಗಡಿಗಳಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.
1.50 ಲಕ್ಷ ರೂ. ಮೌಲ್ಯದ ಸುಮಾರು 145 ಲೀಟರ್ ಮದ್ಯ, 5.9 ಲೀಟ್ ಬಿಯರ್ ವಶಕ್ಕೆ ಪಡೆಯಲಾಗಿದೆ. ಈ ಸಂಬಂಧ ಮೂರು ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ. ಘಟನೆ ಸಂಬಂಧ ನಾಗರಾಜ್ ಮತ್ತು ರವಿ ಎಂಬುವವರನ್ನು ಬಂಧಿಸಲಾಗಿದೆ. ಒಂದು ಆಟೋ ರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ.
ಅಬಕಾರಿ ಉಪ ಆಯುಕ್ತ ಡಾ.ಬಾಲಕೃಷ್ಣ ಸಿ.ಹೆಚ್. ಅವರ ನಿರ್ದೇಶನದ ಮೇರೆಗೆ ಅಬಕಾರಿ ನಿರೀಕ್ಷಕ ಹಾಲಾನಾಯ್ಕ್ ಮತ್ತು ಉಪ ನಿರೀಕ್ಷಕ ಜಾನ್ ಪಿ.ಜೆ, ಸಿಬ್ಬಂದಿ ರಂಜನ್, ನಾಗರಾಜ್, ವಾಹನ ಚಾಲಕ ಅರ್ಜುನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422