ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI | 16 ಅಕ್ಟೋಬರ್ 2019
ತೀರ್ಥಹಳ್ಳಿಯಲ್ಲಿ ಶಂಕಿತ ಭಯೋತ್ಪಾದಕರ ಬಂಧನವಾಗಿದೆ ಎಂಬ ವದಂತಿ ಹಬ್ಬಿದೆ. ಇದರಿಂದ ಜನರು ಆತಂಕಕ್ಕೀಡಾಗಿದ್ದಾರೆ. ಆದರೆ ಜಿಲ್ಲಾ ಪೊಲೀಸ್ ಇಲಾಖೆ ಮಾತ್ರ ಉಗ್ರರ ಬಂಧನ ವಿಚಾರವನ್ನು ತಳ್ಳಿಹಾಕಿದೆ.
ಸುರಾನಿ ಎಂಬ ಗ್ರಾಮದಲ್ಲಿ ಶಿವಮೊಗ್ಗ ಪೊಲೀಸರು ಮಂಗಳವಾರ ಭಾರಿ ತಲಾಷ್ ನಡೆಸಿದ್ದಾರೆ. ಇಲ್ಲಿನ ತೋಟದ ಮನೆಯೊಂದರಲ್ಲಿ ಪೊಲೀಸರು ಕೆಲ ಹೊತ್ತು ತಪಾಸಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಭಾಗದಲ್ಲಿ ಬ್ಯಾರಿಕೇಡ್’ಗಳನ್ನು ಹಾಕಲಾಗಿದೆ. ಇಲ್ಲಿ ಓಡಾಡುವ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇದೆ ಕಾರಣಕ್ಕೆ ಶಿವಮೊಗ್ಗದಲ್ಲಿ ಶಂಕಿತ ಭಯೋತ್ಪಾದಕರ ಬಂಧನವಾಗಿದೆ ಎಂದು ವದಂತಿ ಹಬ್ಬಿಸಲಾಗಿದೆ.
ಸುರಾನಿಯಲ್ಲಿ ಪೊಲೀಸರು ತಲಾಷ್ ಮಾಡಿದ್ದೇಕೆ?
ಭಾರತದಲ್ಲಿ ಸ್ಯಾಟಲೈಟ್ ಫೋನ್ ಬಳಕೆಗೆ ನಿಷೇಧವಿದೆ. ಆದರು ತೀರ್ಥಹಳ್ಳಿಯ ಸುರಾನಿ ಭಾಗದಲ್ಲಿ ಕೆಲ ದಿನದ ಹಿಂದೆ ಸ್ಯಾಟಲೈಟ್ ಫೋನ್ ಸಿಗ್ನಲ್ ಬಳಕೆ ಮಾಡಿಕೊಳ್ಳಲಾಗಿದೆ. ಈ ಕುರಿತು ಪೊಲೀಸ್ ಇಲಾಖೆಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಲಭ್ಯವಾಗಿತ್ತು. ಹಾಗಾಗಿ ದಿಢೀರ್ ತಪಾಸಭೆ ನಡೆಸಲಾಗಿದೆ ಎಂದು ಪೊಲೀಸ್ ಮೂಲಗಳು ಶಿವಮೊಗ್ಗ ಲೈವ್.ಕಾಂಗೆ ತಿಳಿಸಿವೆ.
ಶಿವಮೊಗ್ಗ ಎಸ್.ಪಿ. ಏನಂತಾರೆ?
ಇನ್ನು, ಈ ಬೆಳವಣಿಗೆ ಕುರಿತು ಶಿವಮೊಗ್ಗ ಲೈವ್.ಕಾಂ ಜೊತೆಗೆ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು, ಜನರು ಆತಂಕಕ್ಕೀಡಾಗುವ ಅಗತ್ಯವಿಲ್ಲ. ಕೆಲವು ಪೂರ್ವಭಾವಿ ತನಿಖೆಗಾಗಿ ತಪಾಸಣೆ ನಡೆಸಲಾಗಿದೆ. ಉಗ್ರರ ಬಂಧನವಾಗಿದೆ ಅನ್ನುವುದು ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಈ ಹಿಂದೆ ಶಂಕಿತ ಭಯೋತ್ಪಾದಕರ ಬಂಧನವಾಗಿತ್ತು. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಸುರಾನಿ ಗ್ರಾಮದಲ್ಲಿ ನಡೆದ ಪೊಲೀಸ್ ತಪಾಸಣೆ ವದಂತಿ ಹಬ್ಬಲು ಕಾರಣವಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422