ಆಯತಪ್ಪಿ ಕೆರೆಗೆ ಬಿದ್ದು ರೈತ ಸಾವು, ಆಗಿದ್ದೇನು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ತೀರ್ಥಹಳ್ಳಿ: ಕೃಷಿಭೂಮಿಗೆ ಅಳವಡಿಸಿದ್ದ ಪಂಪ್‌ಸೆಟ್ ಎತ್ತುವ ವೇಳೆ ಆಯತಪ್ಪಿ ಕೆರೆಗೆ ಬಿದ್ದು ರೈತರೊಬ್ಬರು ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.

ಸಾಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟೆಂಕಬೈಲು ಗ್ರಾಮದ ತುಂಬುಕೋಡು ನಿವಾಸಿ ಉಮೇಶ್ (43) ಮೃತಪಟ್ಟ ದುರ್ದೈವಿ. ಕೊಪ್ಪದಲ್ಲಿ ವಾಸವಿದ್ದ ಇವರು, ತಾಯಿ ವಾಸವಿರುವ ಟೆಂಕಬೈಲಿಗೆ ತೋಟದ ಕೆಲಸಕ್ಕಾಗಿ ಬಂದಿದ್ದರು. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಜಮೀನಿನ ಬಳಿ ಕೆರೆಗೆ ಅಳವಡಿಸಿದ್ದ ಪಂಪ್‌ಸೆಟ್‌ ಅನ್ನು ಎತ್ತುವ ವೇಳೆ ಆಯತಪ್ಪಿ ಕೆರೆಗೆ ಬಿದ್ದಿದ್ದಾರೆ. ಅವರಿಗೆ ಈಜಲು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

THIRTHAHALLI-NEWS-GRAPHICS-BY-SHIVAMOGGA-LIVE