ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 15 ಆಗಸ್ಟ್ 2020
ತೀರ್ಥಹಳ್ಳಿಗೆ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಯುವಕರ ತಂಡದ ಮೇಲೆ ಪೊಲೀಸರು ದಾಳಿ ಮಾಡಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಇವರಿಂದ ಒಂದು ಕೆಜಿ 115 ಗ್ರಾಮ್ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಆರೋಪಿಗಳು ಯಾರು? ಎಲ್ಲಿಯವರು?
ಬಂಧಿತ ಆರೋಪಿಗಳೆಲ್ಲ ಭದ್ರಾವತಿಯವರು ಎಂದು ತಿಳಿದು ಬಂದಿದೆ. ಭದ್ರಾವತಿಯ ಎನ್‍ಎಂಸಿಯ ಅರುಣ್ (26), ಪೇಪರ್ ಟೌನ್‍ನ ರಂಜಿತ್ (23), ಭೋವಿ ಕಾಲೋನಿಯ ಕಿರಣ್ (23), ಪ್ರದೀಪ್ (24) ಬಂಧಿತರು.
ಕಾರಲ್ಲಿ ಬಂದು ಗಾಂಜಾ ಮಾರಾಟ
ಈ ಯುವಕರು ಭದ್ರಾವತಿಯಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇವರಿಂದ 20 ಸಾವಿರ ಮೌಲ್ಯದ 1 ಕೆಜಿ 115 ಗ್ರಾಂ ಗಾಂಜಾ, ಒಂದು ಕಾರು, ಐದು ಮೊಬೈಲ್ ಫೋನ್, 6,600 ರೂ. ನಗದು ವಶಕ್ಕೆ ಪಡೆಯಲಾಗಿದೆ.
ತೀರ್ಥಹಳ್ಳಿ ಡಿವೈಎಸ್‍ಪಿ ಡಾ. ಸಂತೋಷ್, ಸಿಪಿಐ ಪ್ರವೀಣ್ ಜಿ ನೀಲಮ್ಮನವರ್ ನೇತೃತ್ವದ ತಂಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು















