ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 27 DECEMBER 2022
ತೀರ್ಥಹಳ್ಳಿ : ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಿರುವ ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಕಾಲಿಡುವುಡು ಬೇಡ. ಒಂದು ವೇಳೆ ಅವರು ತೀರ್ಥಹಳ್ಳಿಗೆ ಬಂದರೆ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ವಿವಿಧ ಸಂಘಟನೆಗಳ ಮುಖಂಡರು ಎಚ್ಚರಿಸಿದ್ದಾರೆ. (go back campaign)
ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲು ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಭೇಟಿ ನೀಡುತ್ತಿದ್ದಾರೆ. ಇದು ಪ್ರಗತಿಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.
(go back campaign)
ಚಕ್ರತೀರ್ಥ ವಿರುದ್ಧ ಆಕ್ರೋಶಕ್ಕೇನು ಕಾರಣ?
ತೀರ್ಥಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ರಾಷ್ಟ್ರ, ರಾಜ್ಯದ ಮಹಾನ್ ವ್ಯಕ್ತಿಗಳಿಗೆ ಅವಮಾನ ಮಾಡಿದ್ದಾರೆ. ಈ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿದ್ದಾರೆ. ಕುವೆಂಪು ಅವರ ಕುರಿತು ಮುಖ್ಯ ಭಾಷಣ ಮಾಡುವ ಅರ್ಹತೆ ಅವರಿಗಿಲ್ಲ ಎಂದರು.
ನಾರಾಯಣಗುರು, ಮಹಾತ್ಮ ಗಾಂಧೀಜಿ, ಡಾ. ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ಅನೇಕ ಮಹಾನೀಯರ ವಿಚಾರಧಾರೆಗೆ, ವ್ಯಕ್ತಿತ್ವಕ್ಕೆ ರೋಹಿತ್ ಚಕ್ರತೀರ್ಥ ಅಪಚಾರ ಎಸಗಿದ್ದಾರೆ. ಕುವೆಂಪು ಅವರ ನಾಡಗೀತೆಯ ಸಾಹಿತ್ಯವನ್ನು ಒಳ ಉಡುಪಿಗೆ ಹೋಲಿಸಿ ವಿಕೃತಿ ಮೆರೆದಿದ್ದಾರೆ ಎಂದು ಟೀಕಿಸಿದರು.
(go back campaign)
ಯಾರೆಲ್ಲ ಏನೇನು ಹೇಳಿದರು?
ಇದನ್ನೂ ಓದಿ – ಶಿವಮೊಗ್ಗದಲ್ಲಿ 2 ಪೊಲೀಸ್ ಉಪ ವಿಭಾಗ ರಚನೆ, ಯಾವ್ಯಾವ ಠಾಣೆ ಯಾವ ಉಪ ವಿಭಾಗಕ್ಕೆ ಒಳಪಡಲಿದೆ?
Go Back Campaign ಆರಂಭ
ಈ ನಡುವೆ ಪ್ರಗತಿಪರರು ಗೋ ಬ್ಯಾಕ್ ಚಳವಳಿ ಅರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ರೋಹಿತ್ ಚಕ್ರತೀರ್ಥ ಗೋ ಬ್ಯಾಂಕ್ ಎಂದು ಪೋಸ್ಟ್ ಪ್ರಕಟಿಸುತ್ತಿದ್ದಾರೆ. ಇದು ತೀವ್ರ ಚರ್ಚೆಗೆ ಕಾರಣವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422