ಸಾಮಾಜಿಕ ಜಾಲತಾಣದಲ್ಲಿ ಗೋ ಬ್ಯಾಕ್ ಚಳವಳಿ, ತೀರ್ಥಹಳ್ಳಿಗೆ ಕಾಲಿಟ್ಟರೆ ಪ್ರತಿಭಟನೆ, ಮಸಿ ಬಳಿಯುವ ಎಚ್ಚರಿಕೆ

SHIVAMOGGA LIVE NEWS | 27 DECEMBER 2022

ತೀರ್ಥಹಳ್ಳಿ : ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಿರುವ ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಕಾಲಿಡುವುಡು ಬೇಡ. ಒಂದು ವೇಳೆ ಅವರು ತೀರ್ಥಹಳ್ಳಿಗೆ ಬಂದರೆ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ವಿವಿಧ ಸಂಘಟನೆಗಳ ಮುಖಂಡರು ಎಚ್ಚರಿಸಿದ್ದಾರೆ. (go back campaign)

Shimoga Nanjappa Hospital

ಕುವೆಂಪು ಸಾಹಿತ್ಯ ಮತ್ತು ರಾಷ್ಟ್ರೀಯತೆ ವಿಷಯ ಕುರಿತು ಮುಖ್ಯ ಭಾಷಣ ಮಾಡಲು ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಭೇಟಿ ನೀಡುತ್ತಿದ್ದಾರೆ. ಇದು ಪ್ರಗತಿಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ.

(go back campaign)

ಚಕ್ರತೀರ್ಥ ವಿರುದ್ಧ ಆಕ್ರೋಶಕ್ಕೇನು ಕಾರಣ?

ತೀರ್ಥಹಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಗತಿಪರ ಸಂಘಟನೆಗಳ ಒಕ್ಕೂಟ, ಪಠ್ಯ ಪರಿಷ್ಕರಣೆ  ಸಮಿತಿ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ರಾಷ್ಟ್ರ, ರಾಜ್ಯದ ಮಹಾನ್ ವ್ಯಕ್ತಿಗಳಿಗೆ ಅವಮಾನ ಮಾಡಿದ್ದಾರೆ. ಈ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸುತ್ತಿದ್ದಾರೆ. ಕುವೆಂಪು ಅವರ ಕುರಿತು ಮುಖ್ಯ ಭಾಷಣ ಮಾಡುವ ಅರ್ಹತೆ ಅವರಿಗಿಲ್ಲ ಎಂದರು.

ನಾರಾಯಣಗುರು, ಮಹಾತ್ಮ ಗಾಂಧೀಜಿ, ಡಾ. ಬಿ.ಆರ್.ಅಂಬೇಡ್ಕರ್, ಕುವೆಂಪು ಸೇರಿದಂತೆ ಅನೇಕ ಮಹಾನೀಯರ ವಿಚಾರಧಾರೆಗೆ, ವ್ಯಕ್ತಿತ್ವಕ್ಕೆ ರೋಹಿತ್ ಚಕ್ರತೀರ್ಥ ಅಪಚಾರ ಎಸಗಿದ್ದಾರೆ. ಕುವೆಂಪು ಅವರ ನಾಡಗೀತೆಯ ಸಾಹಿತ್ಯವನ್ನು ಒಳ ಉಡುಪಿಗೆ ಹೋಲಿಸಿ ವಿಕೃತಿ ಮೆರೆದಿದ್ದಾರೆ ಎಂದು ಟೀಕಿಸಿದರು.

(go back campaign)

ಯಾರೆಲ್ಲ ಏನೇನು ಹೇಳಿದರು?

ಭಾರತ ಜನನಿಯ ತನುಜಾತೆ ಎನ್ನುವ ಕವಿತೆಯನ್ನು ಯಾರು ದೇಶಕ್ಕೆ ನೀಡಿದರೋ ಅಂತಹ ವ್ಯಕ್ತಿಯನ್ನು ಅವಮಾನ ಮಾಡಿ ಆ ಸಾಹಿತ್ಯವನ್ನೇ ತಿರುಚಿದ ವ್ಯಕ್ತಿಯನ್ನು ತೀರ್ಥಹಳ್ಳಿಗೆ ಕರೆಸುತ್ತಿದ್ದಾರೆ. ಚುನಾವಣೆಯ ಮತಕ್ಕಾಗಿ ಆತನನ್ನು ಕರೆಸುತ್ತಿದ್ದಾರೆ. ರಾಜಕೀಯ ಅಜೆಂಡಾ ಏನೇ ಇದ್ದರೂ ಚುನಾವಣೆಯಲ್ಲಿ ತೋರಿಸಿ ಆದರೆ ಕುವೆಂಪು ಅವರ ವಿಷಯ ಇಟ್ಟುಕೊಂಡು ರಾಜಕೀಯ ಮಾಡಬೇಡಿ.ನೆಂಪೆ ದೇವರಾಜ್

Shimoga Nanjappa Hospital

ರಾಷ್ಟ್ರಕವಿ ಕುವೆಂಪು ಅವರನ್ನು ಅವಹೇಳನ ಮಾಡಿ ಶ್ರೀ ನಾರಾಯಣ ಗುರುವಿನ ಬಗ್ಗೆ ಪಠ್ಯ ಪುಸ್ತಕ ವಿಚಾರದಲ್ಲಿ ತಿರುಚಿ ರಾಜ್ಯದಲ್ಲಿ ಅಶಾಂತಿಗೆ ಕಾರಣವಾಗಿದ್ದ ರೋಹಿತ್ ಚಕ್ರತೀರ್ಥ ಅವರನ್ನು ತೀರ್ಥಹಳ್ಳಿಗೆ ಕರೆಸಿ ಕಾರ್ಯಕ್ರಮ ಮಾಡಲು ಹೊರಟಿರುವ ಬಿಜೆಪಿ ಪ್ರಯೋಜಿತ ಕಾರ್ಯಕ್ರಮವನ್ನು ತೀರ್ಥಹಳ್ಳಿಯಲ್ಲಿ ಬಹಿಷ್ಕಾರ ಮಾಡಬೇಕುವೆಂಕಟೇಶ ಹೆಗ್ಡೆ
ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಕಾಲಿಡುವ ಅವಶ್ಯಕತೆಯೇ ಇಲ್ಲ. ಅವರು ಬಂದರೆ ಬಿಜೆಪಿಯವರು ಕುವೆಂಪು ಅವರಿಗೆ ಮಾಡುವ ಅವಮಾನ. ದಾರಿಯಲ್ಲೇ ಅಡ್ಡಗಟ್ಟಿ ಮಸಿ ಬಳಿಯುತ್ತೇವೆ.ಪಡುವಳ್ಳಿ ಹರ್ಷೇಂದ್ರ

ಇದನ್ನೂ ಓದಿ – ಶಿವಮೊಗ್ಗದಲ್ಲಿ 2 ಪೊಲೀಸ್ ಉಪ ವಿಭಾಗ ರಚನೆ, ಯಾವ್ಯಾವ ಠಾಣೆ ಯಾವ ಉಪ ವಿಭಾಗಕ್ಕೆ ಒಳಪಡಲಿದೆ?

ಕುವೆಂಪು ಅವರ ಬಗ್ಗೆ ನಾವು ಶಾಲೆಗಳಿಂದಲೂ ಓದಿ ಅವರ ಬಗ್ಗೆ ಕೇಳಿ ಅದನ್ನು ನಾವೆಲ್ಲರೂ ಮೈಗೂಡಿಸಿಕೊಂಡಿದ್ದೇವೆ. ಈಗಲೂ ಸಮಯವಕಾಶ ಇದ್ದು ರಾಷ್ಟ್ರಕವಿಯನ್ನು ಅವಮಾನ ಮಾಡಿದ ರೋಹಿತ್ ಚಕ್ರತೀರ್ಥರನ್ನು ಕರೆಸದಂತೆ ರಾಮೇಶ್ವರ ದೇವರು ಬಿಜೆಪಿಯವರಿಗೆ ಬುದ್ದಿ ನೀಡಲಿ.ಬಾಳೆಹಳ್ಳಿ ಪ್ರಭಾಕರ್

Go Back Campaign ಆರಂಭ

ಈ ನಡುವೆ ಪ್ರಗತಿಪರರು ಗೋ ಬ್ಯಾಕ್ ಚಳವಳಿ ಅರಂಭಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ರೋಹಿತ್ ಚಕ್ರತೀರ್ಥ ಗೋ ಬ್ಯಾಂಕ್ ಎಂದು ಪೋಸ್ಟ್ ಪ್ರಕಟಿಸುತ್ತಿದ್ದಾರೆ. ಇದು ತೀವ್ರ ಚರ್ಚೆಗೆ ಕಾರಣವಾಗಿದೆ.

Shimoga Nanjappa Hospital

Go-back-campaign-against-Rohit-Chakravathi-in-Thirthahalli

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment