ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 JANUARY 2025
ತೀರ್ಥಹಳ್ಳಿ : ಮನೆಯಲ್ಲಿ ಯಾರೂ ಇಲ್ಲದಾಗ ಚಿನ್ನಾಭರಣ (Gold), 200 ರೂ. ನಗದು ಕಳ್ಳತನ ಮಾಡಲಾಗಿದೆ. ಆಗುಂಬೆ ಸಮೀಪದ ಮೇಗರವಳ್ಳಿಯ ಬಾವಿಕೇರಿಯ ಭಾರತಿ ಎಂಬುವವರ ಮನೆಯಲ್ಲಿ ಘಟನೆ ಸಂಭವಿಸಿದೆ.
ಭಾರತಿ ಅವರು ಸ್ವಸಹಾಯ ಸಂಘದ ಮೀಟಿಂಗ್‌ಗೆ ತೆರಳಿದ್ದರು. ಕಾಲೇಜಿಗೆ ತೆರಳಿದ್ದ ಮಗಳು ಮನೆಗೆ ಬಂದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. ಕೂಡಲೆ ತಾಯಿಗೆ ಕರೆ ಮಾಡಿ ವಿಷಯ ತಿಳಿಸಿದ್ದಳು. ಮನೆಯಲ್ಲಿ ಪರಿಶೀಲಿಸಿದಾಗ ಬೀರುವಿನಲ್ಲಿದ್ದ 16 ಗ್ರಾಂ ತೂಕದ ಚಿನ್ನದ ನೆಕ್ಲೇಸ್, 6 ಗ್ರಾಂ ತೂಕದ ಚಿನ್ನದ ಕವಿಯೋಲೆ, 200 ರೂ. ನಗದು ಕಳ್ಳನತವಾಗಿತ್ತು ಎಂದು ಆರೋಪಿಸಲಾಗಿದೆ.

ಭಾರತಿಯವರು ಮನೆ ಮುಂದಿನ ಬ್ರಷ್ ಡಬ್ಬಿಯಲ್ಲಿ ಇಡುತ್ತಿದ್ದರು. ಮನೆಯಲ್ಲಿ ಯಾರು ಇರುವುದಿಲ್ಲ ಮತ್ತು ಕೀ ಇಡುವ ಜಾಗ ಗೊತ್ತಿರುವವರೆ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ತ್ಯಾವರೆಕೊಪ್ಪ ಸಫಾರಿಯ ಹುಲಿ ಅಂಜನಿ ಸಾವು, ಕಾರಣವೇನು?
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು















