ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
THIRTHAHALLI : ಪ್ರತಿ ಗ್ರಾಮಗಳಲ್ಲು ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಸಂದರ್ಭ ಸರ್ಕಾರ ಕೂಸಿನಮನೆ ಯೋಜನೆ ಜಾರಿಗೊಳಿಸಿದೆ. ಇದು ಗ್ರಾಮ ಪಂಚಾಯಿತಿ ಆಡಳಿತಕ್ಕೆ ಆರ್ಥಿಕವಾಗಿ ಹೊರೆಯಾಗಲಿದೆ ಎಂದು ತೀರ್ಥಹಳ್ಳಿ ತಾಲೂಕು ಗ್ರಾಮ ಪಂಚಾಯಿತಿ ಅಧ್ಯಕ್ಷ – ಉಪಾಧ್ಯಕ್ಷರ ಒಕ್ಕೂಟದ ಅಧ್ಯಕ್ಷ ಟಿ.ಜೆ.ಅನಿಲ್ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ನರೇಗಾ ಯೋಜನೆ ಅಡಿ ಕೆಲಸ ಮಾಡುವ ಮಹಿಳೆಯರು ನೆಮ್ಮದಿಯಿಂದ ಕೆಲಸ ಮಾಡಲು ಮತ್ತು ಅವರ ಮಕ್ಕಳಿಗೆ ಸುರಕ್ಷತೆ, ಪೌಷ್ಟಿಕ ಆಹಾರ ನೀಡಲು ಸಹಕಾರಿ ಆಗಲಿ ಎಂದು ಸರ್ಕಾರ ಕೂಸಿನ ಮನೆ ಯೋಜನೆ ಜಾರಿಗೆ ತಂದಿದೆ. ಆದರೆ ಈ ಯೋಜನೆಯಿಂದ ಪ್ರಯೋಜನ ಇಲ್ಲವಾಗಿದೆ. ಈ ಕಾರ್ಯಕ್ರಮದ ಕುರಿತು ಸರ್ಕಾರ ಮರು ಯೋಚಿಸುವ ಅಗತ್ಯವಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಅನಿಲ್ ಮನವಿ ಮಾಡಿದ್ದಾರೆ.
ಇದನ್ನೂ ಓದಿ – ಸಾಗರದ ಮಾರ್ಕೆಟ್ ರಸ್ತೆ ವಿಸ್ತರಣೆ, ಎಂಎಲ್ಎ, ಡಿಸಿ ನೇತೃತ್ವದಲ್ಲಿ ಸ್ಥಳ ಪರಿಶೀಲನೆ, ಜ.17ರಂದು ಮಹತ್ವದ ಸಭೆ
ನರೇಗಾ ಯೋಜನೆ ಅಡಿ ಅನೇಕ ಕಡೆ ಕೆಲಸ ನಡೆಯುತ್ತಿದೆ. ಆ ಸ್ಥಳಗಳಿಂದ ಕಾರ್ಮಿಕರ ಮಕ್ಕಳು ಏಕ ಸ್ಥಳದ ಕೂಸಿನ ಮನೆಗೆ ಸೇರಿಸುವುದು ಅಸಾಧ್ಯ. ಕೂಸಿನ ಮನೆಗಾಗಿ ಹಳೆ ಕಟ್ಟಡ ಬಳಸಬೇಕೋ, ಹೊಸ ಕಟ್ಟಡ ನಿರ್ಮಿಸಬೇಕೊ ಎಂಬುದರ ಕುರಿತು ಸರ್ಕಾರ ಸ್ಪಷ್ಟನೆ ನೀಡಿಲ್ಲ. ಇದಕ್ಕೆ ಪ್ರತ್ಯೇಕ ಅನುದಾನವನ್ನು ನೀಡಿಲ್ಲ. ಆದ್ದರಿಂದ ಈ ಯೋಜನೆ ಗ್ರಾಮ ಪಂಚಾಯಿತಿಗಳಿಗೆ ಮತ್ತಷ್ಟು ಹೊರೆಯಾಗಲಿದೆ ಎಂದು ತಿಳಿಸಿದ್ದಾರೆ.