ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಡಿಸೆಂಬರ್ 2021
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕು, ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ನೆರವು ನೀಡಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
![]() |
ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು, ಪಶ್ಚಿಮ ಬಂಗಾಳ ಮಾದರಿಯಲ್ಲಿ ಸೇವಾ ಭದ್ರತೆ ಒದಗಿಸಬೇಕು, ಕರ್ನಾಟಕ ಸರ್ಕಾರದ ನಾಗರೀಕ ಸೇವೆಯಲ್ಲಿ ತಮ್ಮ ಸೇವೆಯನ್ನು ವಿಲೀನಗೊಳಿಸಬೇಕು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.
ಇದನ್ನೂ ಓದಿ | ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ಮಾಡಿದ ಉಪನ್ಯಾಸಕರು, ವಿಭಿನ್ನ ಪ್ರತಿಭಟನೆಗೆ ಕಾರಣವೇನು?
ಅತಿಥಿ ಉಪನ್ಯಾಸಕರನ್ನು ಜೀತದ ಆಳುಗಳ ರೀತಿಯಲ್ಲಿ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ. 11 ಸಾವಿರ ರೂ.ವೇತನದಲ್ಲಿ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಆತ್ಮಹತ್ಯೆಗೆ ಶರಣಾದ ಉಪನ್ಯಾಸಕನಿಗೆ ಗೌರವ
ಇನ್ನು, 13 ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಹರ್ಷ ಶಾನುಭೋಗ್ ಅವರು ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ನೆರವು ನೀಡಬೇಕು ಎಂದು ಅತಿಥಿ ಉಪನ್ಯಾಸಕರು ಆಗ್ರಹಿಸಿದರು.
ಇದನ್ನೂ ಓದಿ | ಶಿವಮೊಗ್ಗ ಡಿಸಿ ಕಚೇರಿ ಮುಂದೆ ಟೀ ಮಾರಿದ ಅತಿಥಿ ಉಪನ್ಯಾಸಕರು
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200