ತೀರ್ಥಹಳ್ಳಿಯಲ್ಲಿ ಅತಿಥಿ ಉಪನ್ಯಾಸಕರ ಪ್ರತಿಭಟನೆ, ಜೀತದಾಳುಗಳ ರೀತಿ ದುಡಿಸಿಕೊಳ್ಳುತ್ತಿರುವುದಕ್ಕೆ ಆಕ್ರೋಶ

ಶಿವಮೊಗ್ಗದ ಲೈವ್.ಕಾಂ | SHIMOGA NEWS |  24 ಡಿಸೆಂಬರ್ 2021

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಬೇಕು, ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾದ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ ನೆರವು ನೀಡಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿಯಲ್ಲಿ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

AVvXsEgvkqR5na6VBgyQ7GpgkZA0SK3TnlX05prWtKfmX8meEFOtOAl

ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಅತಿಥಿ ಉಪನ್ಯಾಸಕರು, ಪಶ್ಚಿಮ ಬಂಗಾಳ ಮಾದರಿಯಲ್ಲಿ ಸೇವಾ ಭದ್ರತೆ ಒದಗಿಸಬೇಕು, ಕರ್ನಾಟಕ ಸರ್ಕಾರದ ನಾಗರೀಕ ಸೇವೆಯಲ್ಲಿ ತಮ್ಮ ಸೇವೆಯನ್ನು ವಿಲೀನಗೊಳಿಸಬೇಕು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ | ಶಿವಮೊಗ್ಗ ಡಿಸಿ ಕಚೇರಿ ಮುಂದೆ ಮಜ್ಜಿಗೆ ಮಾರಾಟ ಮಾಡಿದ ಉಪನ್ಯಾಸಕರು, ವಿಭಿನ್ನ ಪ್ರತಿಭಟನೆಗೆ ಕಾರಣವೇನು?

ಅತಿಥಿ ಉಪನ್ಯಾಸಕರನ್ನು ಜೀತದ ಆಳುಗಳ ರೀತಿಯಲ್ಲಿ ಕೆಲಸ ಮಾಡಿಸಿಕೊಳ್ಳಲಾಗುತ್ತಿದೆ. 11 ಸಾವಿರ ರೂ.ವೇತನದಲ್ಲಿ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆತ್ಮಹತ್ಯೆಗೆ ಶರಣಾದ ಉಪನ್ಯಾಸಕನಿಗೆ ಗೌರವ

ಇನ್ನು, 13 ವರ್ಷ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಹರ್ಷ ಶಾನುಭೋಗ್ ಅವರು ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಕುಟುಂಬಕ್ಕೆ ನೆರವು ನೀಡಬೇಕು ಎಂದು ಅತಿಥಿ ಉಪನ್ಯಾಸಕರು ಆಗ್ರಹಿಸಿದರು.

ಇದನ್ನೂ ಓದಿ | ಶಿವಮೊಗ್ಗ ಡಿಸಿ ಕಚೇರಿ ಮುಂದೆ ಟೀ ಮಾರಿದ ಅತಿಥಿ ಉಪನ್ಯಾಸಕರು

ABOUT ME NEW FINAL FINAL

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : December 24, 2021 at 3:24 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಡಿಸೆಂಬರ್ 24, 2021

Leave a Comment