ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 MAY 2021
ಭಾವೈಕ್ಯ ಕೇಂದ್ರ ಹಣಗೆರೆ ಕಟ್ಟೆಗೆ ಹೊಸ ರೂಪ ಕೊಡುವ ಕಾರ್ಯ ಆರಂಭವಾಗಿದೆ. ಕರೋನ ಲಾಕ್ ಡೌನ್ ಸಂದರ್ಭ ಭಕ್ತರು ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದಕ್ಕೆ ನಿರ್ಬಂಧವಿದೆ. ಇದೆ ಸಂದರ್ಭದಲ್ಲಿ ಸ್ವಚ್ಛತಾ ಕಾರ್ಯ ಸೇರಿದಂತೆ ಹೊಸ ರೂಪು ನೀಡುವ ಕೆಲಸ ಶುರುವಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಾಸಕ ಆರಗ ಜ್ಞಾನೇಂದ್ರ ಅವರು ಹಣಗೆರೆ ಕಟ್ಟೆಗೆ ಭೇಟಿ ನೀಡಿ ಸ್ವಚ್ಛತಾ ಕಾರ್ಯದ ಪರಿಶೀಲನೆ ನಡೆಸಿದರು.
ಜಿಲ್ಲೆಯಲ್ಲಿ ಹೆಚ್ಚು ಭಕ್ತರು ಬರುವ ಮತ್ತು ಅಧಿಕ ಆದಾಯ ನೀಡುತ್ತಿರುವ ಕ್ಷೇತ್ರಗಳಲ್ಲಿ ಇದು ಒಂದು. ಆದರೆ ಸ್ವಚ್ಛತೆ ವಿಚಾರದಲ್ಲಿ ಈ ಧಾರ್ಮಿಕ ಕ್ಷೇತ್ರ ಹಲವು ಟೀಕೆಗಳನ್ನು ಎದುರಿಸುತ್ತಿತ್ತು.
ಸ್ವಚ್ಛತೆ ಮತ್ತು ಶಿಸ್ತು ಬದ್ಧ ಕ್ಷೇತ್ರ
ಹಣಗೆರೆ ಕಟ್ಟೆಯನ್ನು ಸ್ವಚ್ಛಗೊಳಿಸುವುದರ ಜೊತೆಗೆ ಇಲ್ಲಿ ಶಿಸ್ತು ರೂಢಿಸುವ ಕೆಲಸವು ಆಗಬೇಕಿದೆ. ಸ್ವಚ್ಛತೆ ಇಲ್ಲದೆ ಇರುವುದರಿಂದ ಸುತ್ತಮುತ್ತಲ ಪರಿಸರಕ್ಕೆ ಹಾನಿಯಾಗುತ್ತಿದೆ. ಅಕ್ಕಪಕ್ಕದ ಊರುಗಳಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿಯು ಇದೆ. ಆದ್ದರಿಂದ ಸ್ವಚ್ಛತಾ ಕಾರ್ಯ ನಡೆಸಲಾಗುತ್ತಿದೆ. ಮುಂದಿನ ಪರಿಸರ ದಿನಾಚರಣೆ ಹೊತ್ತಿಗೆ ಇಲ್ಲಿನ ಚಿತ್ರಣವನ್ನೆ ಬದಲಿಸಲಾಗುತ್ತದೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದರು.
ತಹಶೀಲ್ದಾರ್ ಡಾ. ಶ್ರೀಪಾದ್, ತಾಲೂಕು ಪಂಚಾಯಿತಿ ಸದಸ್ಯ ಸಾಲೇಕೊಪ್ಪ ರಾಮಚಂದ್ರ, ತಾಲೂಕು ಪಂಚಾಯಿತಿ ಇಒ ಡಾ. ಆಶಾಲತಾ, ವನ್ಯಜೀವಿ ವಿಭಾಗದ ಆರ್‍ಎಫ್‍ಒ ಜಗದೀಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಹಲವರು ಈ ವೇಳೆ ಇದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]