ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 2 MAY 2021
ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಕರೋನ ತಪಾಸಣೆಗೆ ಸೋಂಕಿತರಿಂದ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ. ಇದರ ವಿರುದ್ಧ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯ ಸೊಪ್ಪುಗುಡ್ಡೆ ರಾಘವೇಂದ್ರ ಅವರು ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಮನವಿ ಮಾಡಿದ್ದಾರೆ.
ಶಾಸಕ ಆರಗ ಜ್ಞಾನೇಂದ್ರ ಅವರು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೊಪ್ಪುಗುಡ್ಡೆ ರಾಘವೇಂದ್ರ, ರೋಗ ಲಕ್ಷಣಗಳಿರುವ ಕುರಿತು ಪರೀಕ್ಷೆಗೆ ಹಲವರು ಖಾಸಗಿ ಸ್ಕ್ಯಾನಿಂಗ್ ಸೆಂಟರ್ಗೆ ತೆರಳುತ್ತಾರೆ. ಇಲ್ಲಿ ದುಬಾರಿ ದರ ವಿಧಿಸಲಾಗುತ್ತಿದೆ. ಇದಕ್ಕೆ ಕೂಡಲೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.
ಬಳಿಕ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ಈ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದೆ. ಸಿಎಂ ಯಡಿಯೂರಪ್ಪ ಅವರು ಈ ಕುರಿತು ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ. ಅಲ್ಲದೆ ಸ್ಕ್ಯಾನಿಂಗ್ ಸಂಸ್ಥೆಗಳ ಜೊತೆ ಒಪ್ಪಂದ ಮಾಡಿಕೊಂಡು, ಸರ್ಕಾರವೆ ಹಣ ಭರಿಸಿ ಉಚಿತ ಸ್ಕ್ಯಾನಿಂಗ್ ಮಾಡುವ ಯೋಜನೆ ಕಾರ್ಯರೂಪಕ್ಕೆ ತರುವ ಬಗ್ಗೆ ಚಿಂತನೆ ನಡೆಸಿದೆ ಎಂದು ತಿಳಿಸಿದರು.
ನೀವಿನ್ನೂ ಕರೋನ ಲಸಿಕೆ ಪಡೆದಿಲ್ಲವಾ? ಕೂಡಲೆ ಕೆಳಗಿರುವ ಫೋಟೊದಲ್ಲಿನ ನಂಬರ್ಗೆ ಕರೆ ಮಾಡಿ, ಸುರಕ್ಷಿತವಾಗಿ ಲಸಿಕೆ ಪಡೆಯಿರಿ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422