ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 ಸೆಪ್ಟಂಬರ್ 2020
ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ನಿರಂತರ ಮಳೆಯಾಗುತ್ತಿದೆ. ಆಗುಂಬೆ ಭಾಗದಲ್ಲಿ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಉಡುಪಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯಾಗಿದೆ.
ಆಗುಂಬೆ ಭಾಗದಲ್ಲಿ ಮಳೆಯೋ ಮಳೆ
ತಾಲೂಕಿನ ಅಗುಂಬೆ, ಮೇಗರವಳ್ಳಿ ಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ. ಮಾಲತಿ ಮತ್ತು ಸೀತಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ತೋಟ, ಗದ್ದೆಗೆ ನದಿ ನೀರು ನುಗ್ಗಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ.
https://www.facebook.com/liveshivamogga/videos/713860376154624/?t=16
ರಸ್ತೆ ಮೇಲೆ ನಿಂತ ನೀರು
ಸೋಮೇಶ್ವರ ಬಳಿ ರಸ್ತೆಯನ್ನು ಬಂದ್ ಮಾಡಲಾಗಿದೆ. ಹಾಗಾಗಿ ಉಡುಪಿ – ಆಗುಂಬೆ ನಡುವೆ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಇಲ್ಲಿನ ಸೀತಾ ಹೊಟೇಲ್ ಬಳಿ ಸೀತಾ ನದಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸುತ್ತಿವೆ.
ಮತ್ತೊಮ್ಮೆ ಉಕ್ಕಿ ಹರಿದ ತುಂಗೆ
ತೀರ್ಥಹಳ್ಳಿ ತಾಲೂಕಿನಾದ್ಯಂತ ಭಾರಿ ಮಳೆಯಾಗುತ್ತಿದ್ದು ತುಂಗಾ ನದಿ ಮತ್ತೊಮ್ಮೆ ಉಕ್ಕಿ ಹರಿಯುತ್ತಿದೆ. ಹಾಗಾಗಿ ತುಂಗಾ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ.
ಫೋಟೊ, ವಿಡಿಯೋ | ನಿತ್ಯಾನಂದ ಕೆಂದಾಳೆಬೈಲು
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422