ಆಗುಂಬೆ ಘಾಟಿಯ ತಿರುವುಗಳಲ್ಲಿ ಬಿರುಕು, ರಸ್ತೆ, ತಡೆಗೋಡೆ ಕುಸಿತ, ಭಾರಿ ವಾಹನ ಸಂಚಾರ ನಿಷೇಧ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 27 JULY 2023

THIRTHAHALLI : ಭಾರಿ ಮಳೆ, ಭಾರಿ ವಾಹನಗಳ ಓಡಾಟದಿಂದ ಆಗುಂಬೆ ಘಾಟಿಯ (Agumbe Ghat) ಮೂರು ತಿರುವುಗಳಲ್ಲಿ ಸಣ್ಣ ಬಿರುಕು, ರಸ್ತೆ ಕುಸಿತ ಉಂಟಾಗಿದೆ. ಈ ಹಿನ್ನೆಲೆ ತಾತ್ಕಾಲಿಕವಾಗಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶಿಸಿದ್ದಾರೆ.

PARISHRAMA NEET ACADEMY

ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ (Agumbe Ghat) ಘಾಟಿಯಲ್ಲಿ 6, 7 ಮತ್ತು 11ನೇ ತಿರುವಿನಲ್ಲಿ ಭಾರೀ ಮಳೆ ಮತ್ತು ಭಾರೀ ವಾಹನಗಳ ಓಡಾಟದಿಂದ ಸಣ್ಣ ಬಿರುಕು ಹಾಗೂ ಅಲ್ಲಲ್ಲಿ ರಸ್ತೆ ಕುಸಿತ ಕಂಡು ಬಂದಿದೆ. ಅಲ್ಲಲ್ಲಿ ತಡೆಗೋಡೆ ಕುಸಿದಿದ್ದು ಅಪಘಾತದ ಸಂಭವವಿದೆ. ಆದ್ದರಿಂದ ತಾತ್ಕಾಲಿಕವಾಗಿ ಭಾರೀ ವಾಹನ ಸಂಚಾರ ನಿಷೇಧಿಸಿ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.

Agumbe Ghat 1

ಇದನ್ನೂ ಓದಿ – ಪೊಲೀಸರು ಹಾಫ್‌ ಹೆಲ್ಮೆಟ್‌ ಧರಿಸಿದೆರೆ ಕ್ರಮವೇನು? ಠಾಣೆಗಳಿಗೆ ವಾರ್ನಿಂಗ್‌ ಸಂದೇಶ ರವಾನಿಸಿದ ರಕ್ಷಣಾಧಿಕಾರಿ

ಜು.27 ರಿಂದ ಸೆ.15ರವರೆಗೆ ಈ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗದಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಲಾಗಿದೆ. ಭಾರೀ ವಾಹನಗಳು ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಆದೇಶಿಸಲಾಗಿದೆ.

ಎರಡು ಪರ್ಯಾಯ ಮಾರ್ಗ

ತೀರ್ಥಹಳ್ಳಿ-ಉಡುಪಿ ಮಾರ್ಗದಲ್ಲಿ ಚಲಿಸುವ ಭಾರೀ ವಾಹನಗಳು ತೀರ್ಥಹಳ್ಳಿ-ಆಗುಂಬೆ-ಶೃಂಗೇರಿ-ಮಾಳಾಘಾಟ್-ಕಾರ್ಕಳ-ಉಡುಪಿ ಮಾರ್ಗ ಹಾಗೂ ತೀರ್ಥಹಳ್ಳಿ-ಮಾಸ್ತಿಕಟ್ಟೆ-ಸಿದ್ದಾಪುರ-ಕುಂದಾಪುರ-ಉಡುಪಿ ಮಾರ್ಗದಲ್ಲಿ ಸಂಚರಿಸುವಂತೆ ಆದೇಶಿಸಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment