ಶಿವಮೊಗ್ಗ ಲೈವ್.ಕಾಂ | SHIMOGA NEWS | 3 ಆಗಸ್ಟ್ 2021
ಹೊಸನಗರದ ನಗರ ಮತ್ತು ಚಿಕ್ಕಪೇಟೆ ನಡುವೆ ಇರುವ ಸೇತುವೆ ಕುಸಿದಿದೆ. ಇತ್ತ ತೀರ್ಥಹಳ್ಳಿಯ ಭಾರತೀಪುರ ತಿರುವಿನಲ್ಲಿ ರಸ್ತೆ ಕುಸಿತ ಉಂಟಾಗಿದೆ. ಆದ್ದರಿಂದ ಈ ಮಾರ್ಗಗಳಲ್ಲಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಹೊಸನಗರದಿಂದ ನಗರ – ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 (ಸಿ) ರಲ್ಲಿ ಸೇತುವೆ ಕುಸಿದಿದೆ. ನಗರ – ಚಿಕ್ಕಪೇಟೆ ರಸ್ತೆಯಲ್ಲಿ ಈ ಸೇತುವೆ ಇದೆ. ಇತ್ತ ಶಿವಮೊಗ್ಗ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ವಿಹಂಗಮ ನರ್ಸರಿ ತಿರುವಿನಿಂದ ಭಾರತೀಪುರ ತಿರುವಿನಲ್ಲಿ ರಸ್ತೆ ಕುಸಿತ ಉಂಟಾಗಿದೆ.
ಹಾಗಾಗಿ ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಅಲ್ಲದೆ ಪರ್ಯಾಯ ಮಾರ್ಗಗಳನ್ನು ಸೂಚಿಸಲಾಗಿದೆ.
ಪರ್ಯಾಯ ಮಾರ್ಗ ಯಾವುದು?
ಪರ್ಯಾಯ ಮಾರ್ಗ 1 – ಶಿವಮೊಗ್ಗ ಮಾರ್ಗದಿಂದ ಕುಂದಾಪುರ ಮತ್ತು ಕುಂದಾಪುರದಿಂದ-ಶಿವಮೊಗ್ಗಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಸಾಗರ-ಹೊನ್ನಾವರ (ಎನ್‍ಹೆಚ್69) ಮಾರ್ಗದಲ್ಲಿ ಸಂಚರಿಸಬಹುದು.
ಪರ್ಯಾಯ ಮಾರ್ಗ 2 – ಶಿವಮೊಗ್ಗದಿಂದ ಉಡುಪಿ-ಮಂಗಳೂರು ಮತ್ತು ಮಂಗಳೂರಿನಿಂದ ಉಡುಪಿ ಶಿವಮೊಗ್ಗಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಕೊಪ್ಪ-ಕಾರ್ಕಳ-ಮಂಗಳೂರು (ಎಸ್‍ಹೆಚ್ 57, 65 ಮತ್ತು ಎನ್‍ಹೆಚ್ 169ರಲ್ಲಿ) ಮಾರ್ಗದಲ್ಲಿ ಸಂಚರಿಸಬಹುದು.
ಪರ್ಯಾಯ ಮಾರ್ಗ 3 – ಶಿವಮೊಗ್ಗದಿಂದ ಕುಂದಾಪುರಕ್ಕೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ಹೊಸನಗರ-ಹುಲಿಕಲ್ ಘಾಟ್-ಸಿದ್ದಾಪುರ-ಕುಂದಾಪುರ ಮಾರ್ಗದಲ್ಲಿ ಸಂಚರಿಸುವುದು.
ಪರ್ಯಾಯ ಮಾರ್ಗ 4 – ಶಿವಮೊಗ್ಗದಿಂದ ಮಂಗಳೂರಿಗೆ ಸಂಚರಿಸುವ ಭಾರೀ ವಾಹನಗಳು ಶಿವಮೊಗ್ಗ-ನರಸಿಂಹರಾಜಪುರ-ಕೊಪ್ಪ-ಶೃಂಗೇರಿ-ಕಾರ್ಕಳ-ಮಂಗಳೂರು ತಲುಪಬಹುದಾಗಿದೆ.
ನಗರ – ಚಿಕ್ಕಪೇಟೆ ನಡುವಿನ ಸೇತುವೆ ಮತ್ತು ಭಾರತೀಪುರ ತಿರುವಿನಲ್ಲಿ ರಸ್ತೆ ರಿಪೇರಿ ಕಾರ್ಯ ಮುಗಿಯುವವರೆಗೆ ಈ ಮಾರ್ಗದಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ಆದೇಶಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200