ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | THIRTHAHALLI | 15 ಜುಲೈ 2022
ಗ್ರಾಮ ಪಂಚಾಯಿತಿ (GRAMA PANCHAYATH) ಅಧ್ಯಕ್ಷೆ ವಿರುದ್ಧ ನಿಗದಿಯಾಗಿದ್ದ ಅವಿಶ್ವಾಸ ನಿರ್ಣಯದ ಸಭೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಆದ್ದರಿಂದ ಇವತ್ತು ನಡೆಯಬೇಕಿದ್ದ ಅವಿಶ್ವಾಸ ನಿರ್ಣಯ ಸಭೆ ಮುಂದಕ್ಕೆ ಹೋಗಿದೆ.
ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ (BEJJAVALLI) ಗ್ರಾಮ ಪಂಚಾಯತಿ ಅಧ್ಯಕ್ಷೆ ದಾಕ್ಷಾಯಿಣಿ ಬಾಬಣ್ಣ ವಿರುದ್ಧ ಇವತ್ತು ಅವಿಶ್ವಾಸ ನಿರ್ಣಯ ಮಂಡನೆ ನಿಗದಿಯಾಗಿತ್ತು.
12 ಸದಸ್ಯರ ವಿರೋಧ
ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಯು 14 ಸದಸ್ಯರನ್ನು ಹೊಂದಿದೆ. ಈ ಪೈಕಿ ಅಧ್ಯಕ್ಷೆ ದಾಕ್ಷಾಯಿಣಿ ಬಾಬಣ್ಣ ವಿರುದ್ಧ 12 ಸದಸ್ಯರು ಅವಿಶ್ವಾಸ ನಿರ್ಣಯ ಕೈಗೊಂಡಿದ್ದರು. ಅಧ್ಯಕ್ಷರು ಸರ್ವಾಧಿಕಾರಿ ಧೋರಣೆ ಹೊಂದಿದ್ದಾರೆ ಎಂದು ಸದಸ್ಯರು ಆರೋಪಿಸಿದ್ದರು.
ಉಪ ವಿಭಾಗಾಧಿಕಾರಿ ಅವರನ್ನು ಭೇಟಿಯಾಗಿ ಅವಿಶ್ವಾಸ ಹೊಂದಿರುವ ಕುರಿತು ದೂರು ನೀಡಿದ್ದರು. ಈ ಹಿನ್ನೆಲೆ ಉಪವಿಭಾಗಾಧಿಕಾರಿಗಳು ಜುಲೈ 15ರಂದು ಸಭೆ ನಿಗದಿಪಡಿಸಿದ್ದರು. ಈ ನಡುವೆ ಅಧ್ಯಕ್ಷೆ ದಾಕ್ಷಾಯಿಣಿ ಬಾಬಣ್ಣ ಅವರು ರಿಟ್ ಅರ್ಜಿ ಸಲ್ಲಿಸಿದ್ದು, ಹೈ ಕೋರ್ಟ್ ತಡೆಯಾಜ್ಞೆ ನೀಡಿದೆ.
ಇದನ್ನೂ ಓದಿ – ತುಂಗಾ ಡ್ಯಾಂನಿಂದ ಭಾರಿ ಪ್ರಮಾಣದಲ್ಲಿ ನೀರು ಹೊರಕ್ಕೆ, ಮೈದುಂಬಿದ ತುಂಗೆ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422