ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 JANUARY 2023
THIRTHAHALLI : ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆ ಜಾತ್ರೆಗೆ ಹೊರೆ ಕಾಣಿಕೆ ಸಂಗ್ರಹಿಸುವ ವಾಹನಕ್ಕೆ ಚಾಲನೆ ನೀಡಲಾಯಿತು. ದೇವಸ್ಥಾನದ ಆವರಣದಲ್ಲಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ನಾಲ್ಕು ವಾಹನಗಳಿಗೆ ಚಾಲನೆ ನೀಡಿದರು.
ಏನಿದು ಹೊರೆ ಕಾಣಿಕೆ ವಾಹನ?
ಜ.11ರಿಂದ ಮೂರು ದಿನ ತೀರ್ಥಹಳ್ಳಿಯಲ್ಲಿ ಎಳ್ಳಮಾವಾಸ್ಯೆ ಜಾತ್ರೆ ನಡೆಯಲಿದೆ. ಜಿಲ್ಲೆ ಮತ್ತು ಹೊರ ಜಿಲ್ಲೆಯಿಂದ ಲಕ್ಷಾಂತರ ಭಕ್ತರು ಜಾತ್ರೆಯಲ್ಲಿ ಭಾಗವಹಿಸುತ್ತಾರೆ. ಜಾತ್ರೆ ಅಂಗವಾಗಿ ಭಕ್ತರಿಗೆ ಅನ್ನ ಸಂತರ್ಪಣೆ ಮಾಡಲಾಗುತ್ತದೆ. ಇದಕ್ಕಾಗಿ ಭಕ್ತರಿಂದ ಹೊರೆ ಕಾಣಿಕೆ ಸಂಗ್ರಹಿಸಲಾಗುತ್ತದೆ. ಹೊರೆ ಕಾಣಿಕೆ ಸಂಗ್ರಹಿಸಲು ನಾಲ್ಕು ವಾಹನಗಳಿಗೆ ಚಾಲನೆ ನೀಡಲಾಗಿದೆ. ಈ ವಾಹನಗಳು ತಾಲೂಕಿನ ವಿವಿಧೆಡೆ ತೆರಳಿ ಭಕ್ತರಿಂದ ಕಾಣಿಕೆ ಸಂಗ್ರಹಿಸಲಿವೆ. ವಾಹನಗಳಿಗೆ ಹೊರೆ ಕಾಣಿಕೆ ತಲುಪಿಸಲು ಸಾಧ್ಯವಾಗದಿದ್ದರೆ, ದೇಗುಲದ ಕಚೇರಿಯಲ್ಲಿಯು ಸಲ್ಲಿಸಬಹುದಾಗಿದೆ.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಗೀತಾ ರಮೇಶ್ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಇದನ್ನೂ ಓದಿ – ಶಿವಮೊಗ್ಗದ ಸ್ಮಾರ್ಟ್ ಸಿಟಿ ಗಡಿಯಾರದಲ್ಲಿ ದಿಕ್ಕಿಗೊಂದು ಟೈಮ್
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






